ಜ್ಯೋತಿ ವಿಜಯ ಯಾತ್ರೆ ಶುರು: ಸ್ವರ್ಣಿಂ ವಿಜಯ ದಿವಸ ಆಚರಣೆ ಆರಂಭ ; ಪ್ರಧಾನಿ ಮೋದಿ ಚಾಲನೆ

Team Udayavani, Dec 17, 2020, 5:40 AM IST

ಜ್ಯೋತಿ ವಿಜಯ ಯಾತ್ರೆ ಶುರು: ಸ್ವರ್ಣಿಂ ವಿಜಯ ದಿವಸ ಆಚರಣೆ ಆರಂಭ ; ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ: 1971ರ ಡಿಸೆಂಬರ್‌ 16ರಂದು ಪಾಕಿಸ್ತಾನಿ ಸೇನೆಯ ವಿರುದ್ಧದ ಭಾರತದ ಗೆಲುವಿಗೆ ಈಗ 50 ವರ್ಷ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ವರ್ಷಪೂರ್ತಿ ಹಲವು ಕಾರ್ಯಕ್ರಮಗಳ ಮೂಲಕ “ಸ್ವರ್ಣಿಂ ವಿಜಯ ದಿವಸ’ ಆಚರಣೆ ನಡೆಯಲಿದೆ. ಬುಧವಾರ ಪ್ರಧಾನಿ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವಿಜಯ ಜ್ಯೋತಿಯನ್ನು ಬೆಳಗಿಸಿ ವೀರ ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಈ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಈ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿದ ಅನಂತರ ಇಂದಿನ ಬಾಂಗ್ಲಾದೇಶ ಜನ್ಮತಳೆಯಿತು. “”ವಿಜಯ ದಿವಸದಂದು ನಾವು ನಮ್ಮ ಸಶಸ್ತ್ರಪಡೆಗಳು 1971ರಂದು ತೋರಿದ ಅಚಲ ಧೈರ್ಯವನ್ನು ಸ್ಮರಿಸುತ್ತೇವೆ. ಈ ವಿಶೇಷ ವಿಜಯ ದಿವಸದಂದು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವರ್ಣಿಂ ವಿಜಯ ಜ್ಯೋತಿ ಬೆಳಗಿಸುವ ಗೌರವ ನನಗೆ ಸಿಕ್ಕಿದೆ” ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಸೇನಾ ಮುಖ್ಯಸ್ಥರು ಹಾಜರಿದ್ದರು. ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್‌ ನಾಯಕರೂ ಈ ವಿಚಾರದಲ್ಲಿ ಟ್ವೀಟ್‌ ಮಾಡಿದ್ದು, ಭಾರತೀಯ ಸೇನೆಯ ಪರಾಕ್ರಮ ಹಾಗೂ ಇಂದಿರಾ ಗಾಂಧಿಯವರ ನಾಯಕತ್ವವನ್ನು ಸ್ಮರಿಸಿದ್ದಾರೆ.

4 ಜ್ಯೋತಿಗಳು
ನಾಲ್ಕು ಸ್ವರ್ಣಿಂ ವಿಜಯ ಜ್ಯೋತಿಗಳನ್ನು 1971ರ ಯುದ್ಧದ ಪರಮವೀರಚಕ್ರ ಹಾಗೂ ಮಹಾವೀರ ಚಕ್ರ ಪಡೆದ ಧೀರ ಯೋಧರ ಗ್ರಾಮಗಳನ್ನು ಒಳಗೊಂಡು ದೇಶದ ವಿವಿಧ ಭಾಗಗಳಿಗೆ ಕೊಂಡೊಯ್ಯಲಾಗುತ್ತಿದೆ. ಯೋಧರ ಗ್ರಾಮಗಳಿಂದ, ಹೋರಾಟದ ಜಾಗಗಳಿಂದ ಮಣ್ಣನ್ನು ತಂದು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿಡಲಾಗುವುದು ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

93,000 ಪಾಕ್‌ ಸೈನಿಕರು ಶರಣಾಗಿದ್ದರು
ಪಾಕಿಸ್ಥಾನ ವಿರುದ್ಧದ ಅಂದಿನ ಗೆಲುವಿನಲ್ಲಿ ಭಾರತೀಯ ಯೋಧರ ಶೌರ್ಯವನ್ನು ಮರೆಯುವಂತೆಯೇ ಇಲ್ಲ. ಆ ಸಮಯದಲ್ಲಿ ಪಾಕ್‌ ಸೇನೆಯ ಕ್ರೌರ್ಯಕ್ಕೆ 3,800ಕ್ಕೂ ಅಧಿಕ ಬಾಂಗ್ಲಾ (ಪೂರ್ವ ಪಾಕಿಸ್ಥಾನ) ನಾಗರಿಕರು ಮೃತಪಟ್ಟಿದ್ದರು. ಪಾಕ್‌ನ ಈ ಕ್ರೌರ್ಯವನ್ನು ಹತ್ತಿಕ್ಕಲು ಭಾರತೀಯ ಸೇನೆಯು ಮುಕ್ತಿ ವಾಹಿನಿಯ ಸಹಯೋಗದೊಂದಿಗೆ ಪಾಕ್‌ನ ಹೆಡೆಮುರಿಕಟ್ಟಿತ್ತು. ಭಾರತದ ಬಹು ಆಯಾಮದ ದಾಳಿಗೆ ತತ್ತರಿಸಿದ ಪಾಕ್‌ ಡಿ.16, 1971ರಂದು ಭಾರತೀಯ ಸೇನೆಯ ಮುಂದೆ ಮಂಡಿಯೂರಿತು. ಪಾಕ್‌ ಸೇನಾ ಮುಖ್ಯಸ್ಥ ಅಮಿರ್‌ ಅಬ್ದುಲ್ಲಾ ನಿಯಾಜಿ ಸೇರಿ 93 ಸಾವಿರ ಪಾಕ್‌ ಸೈನಿಕರು ಅಂದು ಭಾರತಕ್ಕೆ ಶರಣಾಗಿದ್ದರು. 13 ದಿನಗಳ ಈ ಯುದ್ಧದಲ್ಲಿ 3,800ಕ್ಕೂ ಅಧಿಕ ಭಾರತ-ಪಾಕ್‌ ಸೈನಿಕರು ಮೃತಪಟ್ಟಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.