ಜನ ಅವಕಾಶ ಕೊಟ್ಟರೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆ; ನಟಿ ಕಂಗನಾ
Team Udayavani, Oct 29, 2022, 4:54 PM IST
ನವದೆಹಲಿ: ಸದಾ ಒಂದಲ್ಲ ಒಂದು ಹೇಳಿಕೆಯಿಂದ ಸುದ್ದಿಯಾಗುವ ಬಾಲಿವುಡ್ ನಟಿ ಕಂಗನಾ ರಣಾವತ್ ರಾಜಕೀಯ ಎಂಟ್ರಿಯಾಗುವ ಬಗ್ಗೆ ಸುಳಿವೊಂದನ್ನು ಬಿಟ್ಟು ಕೊಟ್ಟಿದ್ದಾರೆ. ಅಜ್ ತಕ್ ಟಿವಿ ವಾಹಿನಿಯ ʼಪಂಚಾಯತ್ʼ ಎನ್ನುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲಿ ರಾಜಕೀಯ ಸಂಬಂಧಿತ ಪ್ರಶ್ನೆಯೊಂದಕ್ಕೆ ಕಂಗನಾ ಉತ್ತರಿಸಿದ್ದಾರೆ.
ಇತ್ತೀಚೆಗೆ ಕೆಲ ವಿಚಾರಗಳಿಗೆ ಕಂಗನಾ ಅವರು ಮಧ್ಯ ಪ್ರವೇಶಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಅದು ರಾಜಕೀಯವಾಗಿಯೂ ಸುದ್ದಿಯಾಗಿತ್ತು. ಈಗ 2024ರ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಾಂಡಿ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಜನರು ರಾಜಕೀಯಕ್ಕೆ ಸೇರಲು ಬಯಸಿದರೆ ತಾನು ಸ್ಪರ್ಧಿಸುವುದಾಗಿ ಕಂಗನಾ ತಿಳಿಸಿದ್ದಾರೆ.
ಖಾಸಗಿ ಟಿವಿ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾದ ಕಂಗನಾ ರಣಾವತ್ ಅವರಿಗೆ ನಿರೂಪಕ ತಾವು ರಾಜಕೀಯ ಪ್ರವೇಶಿಸಿ ಸಾರ್ವಜನಿಕ ಸೇವೆಯನ್ನು ಮಾಡಲು ಇಚ್ಛೆ ಪಡುತ್ತೀರಾ ಎಂದು ಕೇಳಿದ್ದಾರೆ. ಇದಕ್ಕೆ ಕಂಗನಾ, “ನಾನು ಎಲ್ಲಾ ರೀತಿಯ ಭಾಗವಹಿಸುವಿಕೆಗೆ ಸಿದ್ದವಾಗಿದ್ದೇನೆ. ಹಿಮಾಚಲ ಪ್ರದೇಶದ ಜನರು ನನಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೇವೆ ಮಾಡಲು ಅವಕಾಶ ಕೊಟ್ಟರೆ ಚೆನ್ನಾಗಿರುತ್ತದೆ. ಹಾಗೆ ಆದರೆ ಅದು ನನ್ನ ಸೌಭಾಗ್ಯವೇ ಸರಿಯೆಂದು ಕಂಗನಾ” ಹೇಳಿದ್ದಾರೆ.
ಸದ್ಯ ಕಂಗನಾ ಅವರ ಬಹು ನಿರೀಕ್ಷಿತ ʼಎಮರ್ಜೆನ್ಸಿ” ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರಲ್ಲಿ ಅವರು ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಪಾತ್ರವನ್ನು ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ