ಕಾನ್ಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 17ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ
Team Udayavani, Jun 9, 2021, 9:02 AM IST
ಉತ್ತರಪ್ರದೇಶ: ಬಸ್ ಮತ್ತು ಜೆಸಿಬಿ ಲೋಡರ್ (ಟ್ರಕ್) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 17 ಜನರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಕಾನ್ಪುರದಲ್ಲಿ ನಡೆದಿದೆ. ಈ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನಿಧಿ ಘೋಷಿಸಿದ್ದಾರೆ.
ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು,. ಹಲವು ಮಂದಿ ಗಂಭಿರವಾಗಿ ಗಾಯಗೊಂಡಿದ್ದರು. ಉತ್ತರಪ್ರದೇಶದ ಶತಾಭ್ದಿ ಎಸಿ ಬಸ್ ಕಾನ್ಪುರದಿಂದ ಅಹಮದಾಬಾದ್ ಕಡೆ ವೇಗವಾಗಿ ಪ್ರಯಾಣಿಸುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಜೆಸಿಬಿ ಲೋಡರ್ ಗೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ: ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಮಹಿಳಾ ರೋಗಿ ಮೇಲೆ ಬಲಾತ್ಕಾರ ಯತ್ನ ಆರೋಪ
ಘಟನೆ ಕುರಿತು ಸಂತಾಪ ಸೂಚಿಸಿದ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ, ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ ಆರ್ ಎಫ್) ಪರಿಹಾರ ಘೋಷಣೆ ಮಾಡಲಾಗಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಕೂಡ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ; ವ್ಯಾಪಕ ಜನಾಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್