ಜ.20ರಂದು ಕರ್ನಾಟಕಕ್ಕೆ ರಾಹುಲ್?
Team Udayavani, Dec 30, 2017, 6:00 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನವರಿ 20ರಿಂದ ಮೂರು ದಿನ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದ್ದು, ಜನವರಿ 20 ರಂದು ಬೆಳಗಾವಿಯಲ್ಲಿ ಮಹಿಳಾ ಜನ ಪ್ರತಿನಿಧಿಗಳು ಹಾಗೂ ಮಹಿಳಾ ಪದಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಜನವರಿ 21 ರಂದು ಬಳ್ಳಾರಿಯಲ್ಲಿ ಎಸ್ಟಿ ಸಮುದಾಯದ ಸಮಾವೇಶ ಜನವರಿ 22ರಂದು ರೈತರು ಮತ್ತು ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸುವ ಸಾಧ್ಯತೆ ಇದೆ.
ಅಧ್ಯಕ್ಷರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ರಾಜ್ಯ ನಾಯಕರು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಧ್ಯಕ್ಷರಾದ ಮೊದಲ ಭೇಟಿ ಮೂಲಕವೇ ರಾಹುಲ್ ಗಾಂಧಿ ಚುನಾವಣೆಗೆ ರಣಕಹಳೆ ಊದುವ ಸಾಧ್ಯತೆ ಇದೆ. ಈ ಹಿಂದೆ ನವೆಂಬರ್ 19 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಹಾಗೂ ಮೀನುಗಾರರ ಸಮಾವೇಶಕ್ಕೆ ಆಗಮಿಸಲು ರಾಹುಲ್ ಒಪ್ಪಿಕೊಂಡಿದ್ದರು. ಆದರೆ, ಗುಜರಾತ್ ಚುನಾವಣೆ ಮತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೇರುವುದು ಖಚಿತವಾಗಿದ್ದರಿಂದ ಎರಡೂ ಕಾರ್ಯಕ್ರಮಗಳಿಗೆ ಆಗಮಿಸಿರಲಿಲ್ಲ.
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಭೇಟಿಯನ್ನು ಕರ್ನಾಟಕಕ್ಕೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ಜನವರಿ 20 ರಿಂದ ಮೂರು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’