ಕರುಣಾನಿಧಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ರಾಹುಲ್ ಗಾಂಧಿ
Team Udayavani, Jul 31, 2018, 5:30 PM IST
ಚೆನ್ನೈ : ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ನಗರದ ಆಸ್ಪತ್ರೆಗೆ ದಾಖಲಾಗಿ ಕಳೆದ ನಾಲ್ಕು ದಿನಗಳಿಂದ ಐಸಿಯು ನಲ್ಲೇ ಇರುವ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಭೇಟಿಯಾದರು.
ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ; ಅವರು ಚೆನ್ನಾಗಿದ್ದಾರೆ; ತಮಿಳು ನಾಡಿನ ಜನರಂತೆ ಅವರೋರ್ವ ಗಟ್ಟಿಗ ಮನುಷ್ಯ. ತಮಿಳು ನಾಡಿನ ಸ್ಪೂರ್ತಿಯನ್ನೇ ಅವರು ತಮ್ಮಲ್ಲಿ ಆವಾಹಿಸಿಕೊಂಡಿದ್ದಾರೆ’ ಎಂದು ರಾಹುಲ್ ಗಾಂಧಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದರು.
ಕರುಣಾನಿಧಿ ಜತೆಗೆ ಸುಮಾರು 15 ನಿಮಿಷಗಳನ್ನು ಕಳೆದ ರಾಹುಲ್, ತನ್ನ ತಾಯಿ ಸೋನಿಯಾ ಗಾಂಧಿ ಅವರು ಕರುಣಾನಿಧಿ ಮತ್ತು ಅವರ ಕುಟುಂಬದವರಿಗೆ ಶುಭ ಹಾರೈಕೆಗಳನ್ನು ನನ್ನ ಸಂಗಡ ಕಳುಹಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ