ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಬಿಜೆಪಿ ಮುಖಂಡನ ವಾಹನಕ್ಕೆ ಬೆಂಕಿ
Team Udayavani, Nov 1, 2019, 9:47 AM IST
ಶ್ರೀನಗರ: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು ಬೋನಿಗಮ್ ಗ್ರಾಮದಲ್ಲಿ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಬೆಂಕಿಗೆ ಆಹುತಿಯಾದ ಒಂದು ವಾಹನ ಕುಲ್ಗಾಂವ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅದಿಲ್ ಅಹಮದ್ ಗನಾಯ್ ಅವರಿಗೆ ಸೇರಿದೆ ಎಂದು ವರದಿಯಾಗಿದೆ. ಮನೆಯ ಹೊರಭಾಗ ಪಾರ್ಕಿಂಗ್ ಮಾಡಿದ್ದ ವೇಳೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ಉಗ್ರರು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಅವರು ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ.
ಇತ್ತೀಚಿಗಷ್ಟೇ ಕಾಶ್ಮೀರೇತರ ಐವರು ಕಾರ್ಮಿಕರನ್ನು ಕುಲ್ಗಾಂವ್ ನಲ್ಲಿ ಭಯೋತ್ಪಾದರು ಭೀಕರವಾಗಿ ಹತ್ಯೆ ಮಾಡಿದ್ದರು. ಅದರ ಜೊತೆಗೆ ಟ್ರಕ್ ಚಾಲಕರನ್ನು ಕೂಡ ಸರಣಿಯಾಗಿ ಗುಂಡಿಕ್ಕಿ ಕೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್