ಕೇಜ್ರಿ ದಿಲ್ಲಿ ಆಳುವ ಹಕ್ಕನ್ನು ಕಳೆದುಕೊಂಡಿದ್ದಾರೆ:ಕಾಂಗ್ರೆಸ್‌

Team Udayavani, Jan 19, 2018, 4:53 PM IST

ಹೊಸದಿಲ್ಲಿ  : ಚುನಾವಣಾ ಆಯೋಗ 20 ಆಪ್‌ ಶಾಸಕರ ಅನರ್ಹತೆಗೆ ಶಿಫಾರಸು ಮಾಡಿರುವ ಕಾರಣ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅಧಿಕಾರದಲ್ಲಿರುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ದಿಲ್ಲಿ ಕಾಂಗ್ರೆಸ್‌ ಮುಖ್ಯಸ್ಥ ಅಜಯ್‌ ಮಾಕನ್‌ ಅವರು ಇಂದು ಶುಕ್ರವಾರ ಹೇಳಿದ್ದಾರೆ.

ಇಪ್ಪತ್ತು ಆಪ್‌ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿಯಮ ಬಾಹಿರವಾಗಿ ಸಚಿವ ಸೌಕರ್ಯಗಳನ್ನು ಅನುಭವಿಸುತ್ತಿದ್ದರು. ಅಂತೆಯೇ ಚುನಾವಣಾ ಆಯೋಗ ಈ 20 ಆಪ್‌ ಶಾಸಕರ ಅನರ್ಹತೆಗೆ ರಾಷ್ಟ್ರಪತಿಗೆ ಶಿಫಾರಸು ಮಾಡಿದೆ. ತನ್ನ ಸಚಿವ ಸಂಪುಟದ ಅರ್ಧಾಂಶ ಸಚಿವರು ಅನರ್ಹತೆಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಕೇಜ್ರಿವಾಲ್‌ ಅಧಿಕಾರದಲ್ಲಿ ಇರುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಮಾಕನ್‌ ಟ್ವೀಟ್‌ ಮಾಡಿದ್ದಾರೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಸಂತೆಮರಹಳ್ಳಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿರುವ ಪಡಸಾಲೆಯಲ್ಲಿ ಆಧಾರ್‌ ನೋಂದಣಿಯನ್ನು ಪುನಾರಂಭ ಮಾಡಲಾಗಿದೆ. ಈ ಬಗ್ಗೆ ಉದಯವಾಣಿ ಮೇ. 15 ರಂದು ಆಧಾರ್‌...

  • ಚಾಮರಾಜನಗರ: ಬಸವಾದಿ ಶರಣರು ಸ್ಥಾಪನೆ ಮಾಡಿರುವ ವೀರಶೈವ ಲಿಂಗಾಯತ ಧರ್ಮ ಸಂವಿಧಾನ ಕಲಂನಲ್ಲಿ ಪ್ರತ್ಯೇಕ ಧರ್ಮವಾಗುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಬಂಧುಗಳು...

  • ಹುಮನಾಬಾದ: ಕ್ಯಾಂಪಸ್‌ ಸಂದರ್ಶನ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ನಾಂದಿಯಾಗುತ್ತದೆ ಎಂದು ತೆಲಂಗಾಣ ಜಹೀರಾಬಾದನ ಮಹೀಂದ್ರಾ ಆ್ಯಂಡ್‌ ಮಹಿಂದ್ರಾ ಆಟೋಮೊಬೈಲ್...

  • ಬೀದರ: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿನ ಹವಾನಿಯಂತ್ರಿತ (ಎಸಿ)ವ್ಯವಸ್ಥೆ ಎರಡು ದಿನಗಳಿಂದ ಕೈ ಕೊಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ...

  • ದೇವನಹಳ್ಳಿ: ಇಲ್ಲಿನ ಪುರಸಭೆ ಚುನಾವಣೆ 29ರಂದು 23 ವಾರ್ಡ್‌ಗಳಿಗೆ ವಿವಿಧ ಪಕ್ಷಗಳಿಂದ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಸೋಮವಾರ ಕಡೆ ದಿನವಾಗಿದ್ದರಿಂದ...

  • ನೆಲಮಂಗಲ: ಕಾರು ಶೋಕಿಗಾಗಿ ಚಾಲಕನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನದ ವೇಳೆ ಪೊಲೀಸರ ಬಂದೂಕುಗಳು ಸದ್ದು ಮಾಡಿರುವ ಘಟನೆ ಮಂಗಳವಾರ ಬೆಳ್ಳಂಬೆಳ್ಳಗ್ಗೆ...