ಕೋವಿಡ್‌ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭ! ಭಾವುಕಳಾದ ವಧು

Team Udayavani, Sep 28, 2020, 9:54 PM IST

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭ! ಭಾವುಕಳಾದ ವಧು

ತಿರುವನಂತಪುರಂ: ಮಾನವೀಯತೆಯೇ ಸತ್ತು ಹೋಗಿದೆ ಎನ್ನುವ ಕಾಲದಲ್ಲಿ, ಮಾನವೀಯತೆ ಸತ್ತಿಲ್ಲ ಇನ್ನೂ ಬದಕಿಯೇ ಇದೆ ಎಂದು ಸಾರುವ ಘಟನೆಗಳು ಆಗಾಗ ನಮ್ಮ ಸುತ್ತಮುತ್ತ ನಡೆಯುತ್ತಿರುತ್ತವೆ. ಅಂತದ್ದೇ ಒಂದು ಘಟನೆಗೆ ಕೇರಳದ ಕೊಚ್ಚಿಯಲ್ಲಿರುವ ಕೋವಿಡ್‌-19 ಆರೈಕೆ ಕೇಂದ್ರ ಸಾಕ್ಷಿಯಾಗಿದೆ. ಕಳೆದ ಗುರುವಾರ ಕೊಚ್ಚಿಯ ಈ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭವೊಂದು ನಡೆದಿದ್ದು, ಸಮಾರಂಭದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮದುವೆಗೆ ಒಂದು ದಿನ ಬಾಕಿ ಇರುವಾಗ ಫಾಜಿಯಾ (19) ಎಂಬ ಯುವತಿಗೆ ಕೋವಿಡ್‌-19 ಸೋಂಕು ದ್ರಢಪಟ್ಟಿದ್ದು, ಆಕೆಯನ್ನು ಮಟ್ಟಂಚೇರಿಯ ಕೋವಿಡ್‌ ಆರೈಕೆ ಕೇಂದ್ರಕ್ಕೆ ಸೇರಿಸಲಾಯಿತು. ಇದರಿಂದ ಯುವತಿ ಬೇಸರಗೊಂಡಿದ್ದಳು. ಆದರೆ ಆರೈಕೆ ಕೇಂದ್ರದ ಇತರ ಸಹವಾಸಿಗಳು ಸೇರಿಕೊಂಡು ಮದುವೆ ದಿನ ಗುಟ್ಟಾಗಿ ಸಮಾರಂಭ ಏರ್ಪಡಿಸಿ ಆಕೆಯ ಖುಷಿಗೆ ಕಾರಣರಾಗಿದ್ದಾರೆ.

ಫಾಜಿಯಾಳನ್ನು ಮದುವೆ ಹೆಣ್ಣಿನಂತೆ ಶೃಂಗರಿಸಿ “ಒಪ್ಪಾನಾ’ (ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಹಾಡು, ನೃತ್ಯಮಾಡು ಆಚರಣೆಯಾಗಿದೆ) ಏರ್ಪಡಿಸಿದ್ದಾರೆ. ಇತರ ರೋಗಿಗಳು ಅವಳ ಸುತ್ತ ಹಾಡಿ, ನಲಿಯುತ್ತ ಅವಳನ್ನು ಹುರಿದುಂಬಿಸುವ ಮಾನವೀಯ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ.

“ನಮ್ಮ ಆರೈಕೆ ಕೇಂದ್ರಕ್ಕೆ ಹಸ್ತಾಂತರಿಸುವಾಗ ಮರುದಿನ ಆಕೆಯ ಮದುವೆ ಇರುವ ನಗ್ಗೆ ಗೊತ್ತಾಯಿತು. ಈ ವಿಷಯವನ್ನು ಇತರ ರೋಗಿಗಳೊಂದಿಗೆ ಹಂಚಿಕೊಂಡಾಗ, ಆಕೆಗೆ ಸಮಾರಂಭ ಏರ್ಪಡಿಸುವ ಬಗ್ಗೆ ಎಲ್ಲರೂ ಸಮ್ಮತಿ ಸೂಚಿಸಿದರು. ವಾರ್ಡ್‌ಗಳಲ್ಲಿ ರೋಗಿಗಳ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಮನೋರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಎಲ್ಲ ರೋಗಿಗಳು ಸಮಾರಂಭದಲ್ಲಿ ಭಾಗವಹಿಸಿ ಸಂಭ್ರಮಿಸಿದ್ದಾರೆ’ ಎಂದು ಹೆಲ್ತ್‌ ಇನ್‌ಸ್ಪೆಕ್ಟರ್‌ ಕೆ. ಸುಧೀರ್‌ ತಿಳಿಸಿದ್ದಾರೆ. ಅವಳ ಮದುವೆಯನ್ನು ಮಸೀದಿಯಲ್ಲಿ ನಿರ್ಧರಿಸಲಾಗಿದ್ದರಿಂದ ವಧುವಿನ ಉಪಸ್ಥಿತಿ ಕಡ್ಡಾಯವಲ್ಲವೆಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ.

ಮಧುವೆ ಸಮಾರಂಭ ಸಡಗರದಿಂದ ನಡೆದಿದ್ದು, ಎಲ್ಲ ರೋಗಿಗಳೂ ಸೇರಿ ಗ್ರೂಪ್‌ ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ. ಅಲ್ಲದೇ ಎಲ್ಲರಿಗೂ ಬಿರಿಯಾನಿ ಮತ್ತು ಸಿಹಿತಿಂಡಿಯ ವ್ಯವಸ್ಥೆಯನ್ನೂ ಆರೈಕೆ ಕೇಂದ್ರದ ರೋಗಿಗಳು ಮಾಡಿದ್ದಾರೆ.  “ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ಘಟನೆ. ನಾನು ದುಖಃದಲ್ಲಿದ್ದೆ. ನನ್ನನ್ನು ಖುಷಿಪಡಿಸಲು ಇವರು ಏರ್ಪಡಿಸಿದ ಸಮಾರಂಭವನ್ನು ನಾನೆಂದು ಮರೆಯಲಾರೆ’ ಎಂದು ಫಾಜಿಯಾ ಹೇಳಿದ್ದಾಳೆ. ಈಕೆ ಸದ್ಯೆ ಪದವಿ ಓದುತ್ತಿದ್ದಾಳೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.