ಕೇರಳ ಸಿಎಂ ಕಚೇರಿಗೆ ಮೆತ್ತಿದ ಚಿನ್ನದ ಕಳಂಕ

ಕಳ್ಳ ಸಾಗಣೆ ಪ್ರಕರಣ: ಐಎಎಸ್‌ ಅಧಿಕಾರಿ ವಜಾ; ಸಿಬಿಐ ತನಿಖೆಗೆ ಪ್ರತಿಪಕ್ಷಗಳ ಒತ್ತಾಯ

Team Udayavani, Jul 8, 2020, 8:24 AM IST

ಕೇರಳ ಸಿಎಂ ಕಚೇರಿಗೆ ಮೆತ್ತಿದ ಚಿನ್ನದ ಕಳಂಕ

ಸರಿತ್‌ ಎಂಬಾತನನ್ನು ಚಿನ್ನ ಕಳ್ಳ ಸಾಗಣೆ ಆರೋಪದಡಿಯಲ್ಲಿ ಬಂಧಿಸಿರುವ ಕಸ್ಟಮ್ಸ್‌ ಅಧಿಕಾರಿಗಳು ಮಂಗಳವಾರ ಕೊಚ್ಚಿಯಲ್ಲಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರು­ಪಡಿಸಲು ಕರೆತರುತ್ತಿರುವುದು.

ತಿರುವನಂತಪುರ: ಚಿನ್ನ ಕಳ್ಳ ಸಾಗಣೆ ಆರೋಪಿ ಜತೆಗೆ ಶಾಮೀಲಾಗಿರುವ ಆರೋಪಕ್ಕೆ ಸಂಬಂಧಿಸಿ ದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಕಾರ್ಯದರ್ಶಿ, ಐಎಎಸ್‌ ಅಧಿಕಾರಿ ಎಂ.ಶಿವಶಂಕರ್‌ ಅವರನ್ನು ವಜಾ ಮಾಡಲಾಗಿದೆ. ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿಯೂ ಆಗಿರುವ ಅವರಿಗೆ ರಾಜೀನಾಮೆ ನೀಡುವಂತೆ ಸಿಎಂ ಸೂಚಿಸಿದ್ದಾರೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ, ಯುಡಿಎಫ್ ಮತ್ತು ಇತರ ವಿಪಕ್ಷಗಳು ಸಿಬಿಐನಿಂದಲೇ ಪ್ರಕರಣದ ವಿರುದ್ಧ ತನಿಖೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿವೆ. ಇದೇ ವೇಳೆ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕೇರಳ ಮಾಹಿತಿ ತಂತ್ರಜ್ಞಾನ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ನಿರ್ವಹಣಾ ಅಧಿಕಾರಿಯಾಗಿರುವ ಸ್ವಪ್ನಾ ಸುರೇಶ್‌ ಅವರನ್ನು ಅಮಾನತು ಮಾಡಲಾಗಿದೆ.

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿತ್‌ ಕುಮಾರ್‌ ಎಂಬಾತನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆತ ಸ್ವಪ್ನಾ ಸುರೇಶ್‌ಗಾಗಿ ಕಾಯುತ್ತಿದ್ದೇನೆ. ಆಕೆ ನನ್ನ ಸ್ನೇಹಿತೆ ಎಂದು ಹೇಳಿದ್ದ. ರಾಜತಾಂತ್ರಿಕ ಅಧಿಕಾರಿಗಳಿಗೆ ಇರುವ ರಕ್ಷಣೆ ದುರುಪಯೋಗ ಮಾಡಿಕೊಂಡು ಚಿನ್ನ ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದರು.

ಸ್ವಪ್ನಾ ಸುರೇಶ್‌ ತಿರುವನಂತಪುರದ ಯುಎಇ ದೂತಾವಾಸದಲ್ಲಿ ಕೆಲಕಾಲ ಉದ್ಯೋಗಿಯಾಗಿದ್ದರು. ಹೀಗಾಗಿ ಆಕೆಯ ನೆರವಿನಿಂದಲೇ ಬೃಹತ್‌ ಮಟ್ಟದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಣೆ ಜಾಲದಲ್ಲಿ ಆಕೆಯ ಪಾತ್ರ ಕಸ್ಟಮ್ಸ್‌ ಅಧಿಕಾರಿಗಳಿಗೆ ದೃಢಪಟ್ಟಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಆಕೆಯ ವಿಚಾರಣೆಯನ್ನೂ ನಡೆಸಲಾಗಿತ್ತು. ಇದೇ ವೇಳೆ, ಆಕೆಯ ವಿರುದ್ಧ ದೂತಾವಾಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಿದ್ದಿದ ಆರೋಪಗಳೂ ಇವೆ.

ಐಟಿ ಇಲಾಖೆಯಲ್ಲಿ ಉದ್ಯೋಗ: ದೂತಾವಾಸದ ಕಚೇರಿಯ ಉದ್ಯೋಗದ ಬಳಿಕ ಆಕೆಯನ್ನು ಕೇರಳ ಮಾಹಿತಿ ತಂತ್ರಜ್ಞಾನ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ನಿರ್ವಹಣಾ ಅಧಿಕಾರಿಯನ್ನಾಗಿ ನೇಮಿಸ ಲಾಗಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ಸ್ವಪ್ನಾ ಸುರೇಶ್‌ ಜತೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಫೋಟೋಗಳೂ ವೈರಲ್‌ ಆಗಿವೆ. ವಜಾಗೊಂಡಿರುವ ಕಾರ್ಯದರ್ಶಿ ಶಿವಶಂಕರ್‌ ಮತ್ತು ಸ್ವಪ್ನಾಗೆ ನಿಕಟ ಸಂಪರ್ಕ ಇತ್ತು ಎಂದು ಆರೋಪಿಸಲಾಗಿದೆ. ಐಎಎಸ್‌ ಅಧಿಕಾರಿ ಈ ಜಾಲಕ್ಕೆ ನೆರವು ನೀಡಿದ್ದರೆಂದು ಹೇಳಲಾಗಿದೆ. ಅಕ್ರಮದಲ್ಲಿ ಭಾಗಿಯಾದದ್ದು ದೃಢಪಡುತ್ತಲೇ ಸ್ವಪ್ನಾರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ಇದರ ಜತೆಗೆ ಆಕೆ ನಾಪತ್ತೆಯಾಗಿದ್ದಾಳೆ.

ಸಿಬಿಐ ತನಿಖೆಗೆ ನಡೆಯಲಿ: ಸಿಎಂ ಪ್ರಧಾನ ಕಾರ್ಯದರ್ಶಿಯನ್ನು ವಜಾ ಮಾಡಿರುವಂತೆಯೇ ರಾಜಕೀಯ ಟೀಕಾ ಪ್ರಹಾರ ಬಿರುಸಾಗಿದೆ. ವಿವಾದದ ಬಗ್ಗೆ ಸಿಬಿಐನಿಂದಲೇ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಯುಎಇ ದೂತವಾಸದಲ್ಲಿ ಉದ್ಯೋಗಿಯಾಗಿದ್ದ ಆಕೆಯ ವಿರುದ್ಧ ಗುರುತರ ಆರೋಪಗಳಿದ್ದವು. ಅಂಥ ಮಹಿಳೆಗೆ ಕೇರಳ ಸರಕಾರದ ಸಂಸ್ಥೆಯಲ್ಲಿ ಹೇಗೆ ಕೆಲಸ ಸಿಕ್ಕಿತು ಎಂದು ಚೆನ್ನಿತ್ತಲ ಪ್ರಶ್ನೆ ಮಾಡಿದ್ದಾರೆ. ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್‌ ಪ್ರತಿಕ್ರಿಯೆ ನೀಡಿ, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಆಕೆಯ ವಿಚಾರಣೆ ನಡೆಸಿ ದ್ದರು. ಅಂಥ ಮಹಿಳೆಯನ್ನು ಪ್ರಮುಖ ಹುದ್ದೆಗೆ ಹೇಗೆ ನೇಮಕ ಮಾಡಲಾಯಿತು ಎಂದು ಪ್ರಶ್ನಿಸಿದ್ದಾರೆ.ಕೆ.ಸುರೇಂದ್ರನ್‌.

15 ಬಾರಿ ಸ್ಮಗ್ಲಿಂಗ್‌
30 ಕೆಜಿ ಚಿನ್ನದೊಂದಿಗೆ ಸಿಕ್ಕಿಹಾಕಿಕೊಂಡಿರುವ ಸರಿತ್‌, ಈ ಹಿಂದೆ 15 ಬಾರಿ ಚಿನ್ನದ ಕಳ್ಳಸಾಗಣೆ ಮಾಡಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ರಾಜತಾಂತ್ರಿಕ ಸಿಬಂದಿಯ ಲಗೇಜುಗಳನ್ನು ಅಷ್ಟು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವುದಿಲ್ಲ ಎಂದು ತಿಳಿದಿದ್ದ ಆತ, ವಿದೇಶಗಳಿಂದ ಚಿನ್ನವನ್ನು ಭಾರತಕ್ಕೆ ತರಲು ಇದೇ ಮಾರ್ಗವನ್ನು ಅವಲಂಬಿಸಿದ್ದ. ತಿರುವನಂತಪುರ ವಿಮಾನ ನಿಲ್ದಾಣದ ಮೂಲಕ 8 ಬಾರಿ ಚಿನ್ನವನ್ನು ಸ್ವದೇಶದೊಳಕ್ಕೆ ತಂದಿದ್ದ ಆತ, ಇನ್ನುಳಿದ 7 ಬಾರಿ ಕೊಚ್ಚಿ ಬಂದರಿನ ಮೂಲಕ ಚಿನ್ನ ತಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಯಾರು ಈ ಸ್ವಪ್ನ ಸುರೇಶ್‌?

ಇವರು ಅಬುಧಾಬಿಯಲ್ಲಿ ಹುಟ್ಟಿ ಅಲ್ಲಿಯೇ ಬೆಳೆದವರು. ಆಕೆಯ ತಂದೆ ತಿರುವನಂತಪುರದ ಬಲರಾಮಪುರದವರು. ತಿರುವನಂತಪುರದಲ್ಲಿ ಎರಡು ವರ್ಷ ಟ್ರಾವೆಲ್‌ ಏಜೆನ್ಸಿಯೊಂದರಲ್ಲಿ ಕೆಲಸ ಮಾಡಿದ್ದ ಸ್ವಪ್ನಾ, ಆನಂತರ ಏರ್‌ ಇಂಡಿಯಾ ಸ್ಯಾಟ್ಸ್‌ಗೆ 2013ರಲ್ಲಿ ಉದ್ಯೋ­­ಗಿಯಾಗಿ ಸೇರಿದ್ದರು. ಅಲ್ಲಿ ಅಧಿಕಾರಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಸ್ವಪ್ನಾ, ಪೊಲೀಸರ ಗಮನ ಸೆಳೆದಿದ್ದಳು. ಆ ಪ್ರಕರ­ಣದ ತನಿಖೆ ನಡೆಸಲು ಆರಂಭಿಸಿದಾಗ “ನಕಲಿ ಸಹಿ’ ಪ್ರಕರಣವೊಂದು ತೆರೆದುಕೊಂಡಿತು. ಅದರ ಜತೆಯಲ್ಲೇ, ಸ್ವಪ್ನಾರ ಲೈಂಗಿಕ ಕಿರುಕುಳ ಪ್ರಕರಣ ಸುಳ್ಳು ಎಂಬುದು ಸಾಬೀತಾಗಿತ್ತು. ಇದು ತಿಳಿ­­­ಯುತ್ತಲೇ 2016ರಲ್ಲಿ ಅಬುಧಾಬಿಗೆ ಹಿಂದಿರು­ಗಿದ್ದ ಸ್ವಪ್ನಾ ಅವರನ್ನು ಮತ್ತೆ ಕರೆಸಿಕೊಂಡು ಪ್ರಕರಣ ವಿಚಾ­ರಣೆ ನಡೆಸಲಾಗುತ್ತಿತ್ತು. ಆದರೆ ಪ್ರತಿ ಬಾರಿ ಅವರನ್ನು ವಿಚಾರಣೆಗೆ ಒಳಪಡಿಸಿದ ಕೂಡಲೇ ಪ್ರಭಾವಿಗಳಿಂದ ಪೊಲೀಸರಿಗೆ ಫೋನುಗಳು ಬರು­ತ್ತಿದ್ದವು. ಅವರನ್ನು ಬೇಗನೇ ಹೊರಗೆ ಕಳಿಸುವಂತೆ ಸೂಚಿಸಲಾಗುತ್ತಿತ್ತು ಎಂದು “ದ ವೀಕ್‌’ ತಿಳಿಸಿದೆ. ಇದರ ನಡುವೆಯೇ ಅವರು, ಯುಎಇ ದೂತಾ­ವಾಸದ ಕಾನ್ಸುಲೇಟ್‌ ಜನರಲ್‌ ಆಗಿ ನೇಮಕ­ಗೊಂ­ಡರು. ಆದರೆ ಇಲ್ಲಿಯೂ ಹಲವಾರು ಅಸಮ­ರ್ಪಕ ಕೆಲಸಗಳಿಂದಾಗಿ ಆ ಕೆಲಸದಿಂದ ವಜಾ­­ಗೊಂಡರು. ಆದರೆ ಆ ಕೆಲಸದಲ್ಲಿದ್ದಾಗ ಸೌದಿಯ ಹಲವಾರು ರಾಜಕೀಯ ನಾಯಕರ ಸಂಪರ್ಕ ಗಳಿಸಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.