ಕೋವಿಡ್ 19: ಸರ್ಕಾರಿ ನೌಕರರ ಸಂಬಳ ಕಡಿತ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ
ಸಂಬಳ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹಲವು ಸರ್ಕಾರಿ ನೌಕರರು ಹಾಗೂ ಸಂಸ್ಥೆಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.
Team Udayavani, Apr 28, 2020, 8:05 PM IST
Kerala High court
ತಿರುವನಂತಪುರಂ: ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿರುವ ನಡುವೆಯೇ ರಾಜ್ಯ ಸರ್ಕಾರಿ ನೌಕರರ ಸಂಬಳವನ್ನು ಕಡಿತಗೊಳಿಸುವ ಕೇರಳ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ ಎಂದು ವರದಿ ತಿಳಿಸಿದೆ.
“ರಾಜ್ಯ ಸರ್ಕಾರಿ ನೌಕರರ ಪ್ರತಿ ತಿಂಗಳ ಆರು ದಿನದ ಸಂಬಳವನ್ನು ಮುಂದಿನ ಐದು ತಿಂಗಳ ಕಾಲ ಕಡಿತಗೊಳಿಸಲಾಗುವುದು ಎಂದು” ಕೇರಳ ಸರ್ಕಾರ ಆದೇಶ ಹೊರಡಿಸಿತ್ತು. ಇದು ಎಲ್ಲಾ ರಾಜ್ಯ ಸರ್ಕಾರಿ ಸ್ವಾಮಿತ್ವದ ಎಂಟರ್ ಪ್ರೈಸಸ್, ಪಬ್ಲಿಕ್ ಸೆಕ್ಟರ್ ಅಂಡರ್ ಟೇಕಿಂಗ್, ಖ್ವಾಸಿ ಸರ್ಕಾರಿ ಸಂಸ್ಥೆಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿತ್ತು.
ಸಂಬಳ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹಲವು ಸರ್ಕಾರಿ ನೌಕರರು ಹಾಗೂ ಸಂಸ್ಥೆಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. 20ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ನೌಕರರ ಸಂಬಳವನ್ನು ಕಡಿತಗೊಳಿಸಬಾರದು ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ವರದಿ ವಿವರಿಸಿದೆ.
ಸರ್ಕಾರದ ಆದೇಶದಲ್ಲಿ ಸಚಿವರು, ಶಾಸಕರು, ವಿವಿಧ ನಿಗಮದ ಸದಸ್ಯರು, ಸ್ಥಳೀಯ ಪಂಚಾಯತ್ ಸದಸ್ಯರು, ವಿವಿಧ ಆಯೋಗಗಳ ಸಂಬಳವನ್ನು ಮುಂದಿನ ಒಂದು ವರ್ಷದವರೆಗೆ ಶೇ,.30ರಷ್ಟು ಸಂಬಳ ಕಡಿತ ಮಾಡಲಾಗುವುದು ಎಂದು ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ