ಇರಾನ್ ಮಾದರಿ: ಕೇರಳದಲ್ಲಿ ಹಿಜಾಬ್ ಸುಟ್ಟು ಮುಸ್ಲಿಂ ಮಹಿಳೆಯರ ಪ್ರತಿಭಟನೆ
Team Udayavani, Nov 7, 2022, 3:23 PM IST
ಕೋಝಿಕೋಡ್ : ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ಆಂದೋಲನಕ್ಕೆ ಬೆಂಬಲ ಸೂಚಿಸಿ ಕೇರಳದ ಕೆಲ ಮುಸ್ಲಿಂ ಮಹಿಳೆಯರು ಹಿಜಾಬ್ ಅನ್ನು ಸುಟ್ಟು ಹಾಕಿ ಪ್ರತಿಭಟಿಸಿದ ಘಟನೆ ಭಾನುವಾರ (ನ6 ರಂದು) ನಡೆದಿದೆ. ಕೇರಳ ಯುಕ್ತಿವಾದಿ ಸಂಗಮ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಈ ಘಟನೆ ನಡೆದಿದೆ.
ಮುಂದಿನ ತಿಂಗಳು ಮಲಪ್ಪುರಂನಲ್ಲಿ ನಡೆಯಲಿರುವ ಮತ್ತೊಂದು ಸೆಮಿನಾರ್‌ಗೆ ಮುನ್ನ “ಅಭಿಮಾನಿಗಳು-ವಿಜ್ಞಾನ ಮತ್ತು ಮುಕ್ತ ಚಿಂತನೆ” ಎಂಬ ಸೆಮಿನಾರ್ ಅನ್ನು ಕೋಝಿಕೋಡ್‌ನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ, ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ಚಳವಳಿಗೆ ಒಗ್ಗಟ್ಟಿನಿಂದ ಬೆಂಬಲ ಸೂಚಿಸಿದ ಕೆಲವು ಮುಸ್ಲಿಂ ಮಹಿಳೆಯರು ಹಿಜಾಬ್ ಅನ್ನು ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದರು.
ಸಂಘಟನೆಯ ಆರು ಮುಸ್ಲಿಂ ಮಹಿಳೆಯರು ಹಿಜಾಬ್ ಗಳನ್ನು ಸುಡುವ ನೇತೃತ್ವ ವಹಿಸಿದ್ದರು. ಭಾರತದಲ್ಲಿ ಸಾರ್ವಜನಿಕವಾಗಿ ಹಿಜಾಬ್ ದಹನದ ಮೊದಲ ಘಟನೆ ಇದಾಗಿದೆ.
ಇರಾನ್‌ನಲ್ಲಿ ಹಿಜಾಬ್ ಕಡ್ಡಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಒಗ್ಗಟ್ಟಿನಿಂದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು ಮತ್ತು ಫಲಕಗಳನ್ನು ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ
ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್
ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ
MUST WATCH
ಹೊಸ ಸೇರ್ಪಡೆ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ