ಆನ್ಲೈನ್ ನಲ್ಲಿ ಬಿರಿಯಾನಿ ತರಿಸಿ ತಿಂದ ಬಳಿಕ ಮೃತಪಟ್ಟ ಯುವತಿ: ತನಿಖೆಗೆ ಆದೇಶ
Team Udayavani, Jan 7, 2023, 1:45 PM IST
ಕಾಸರಗೋಡು: ಆನ್ಲೈನ್ ನಲ್ಲಿ ಬಿರಿಯಾನಿ ಆರ್ಡರ್ ಮಾಡಿ ತಿಂದ ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಪೆರುಂಬಳದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
20 ವರ್ಷದ ಯುವತಿ ಡಿ.31 ರಂದು ಸ್ಥಳೀಯ ರೆಸ್ಟೋರೆಂಟ್ ವೊಂದರಿಂದ ಕುಝಿಮಂತಿ ಬಿರಿಯಾನಿ( ಕೇರಳದಲ್ಲಿ ಜನಪ್ರಿಯ ಬಿರಿಯಾನಿ) ಯನ್ನು ಆನ್ಲೈನ್ ಮೂಲಕ ತರಿಸಿಕೊಂಡಿದ್ದಳು. ಬಿರಿಯಾನಿ ಸೇವಿಸಿದ ಬಳಿಕ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.
ಶನಿವಾರ ಮುಂಜಾನೆ ಯುವತಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಮೃತಳ ಪೋಷಕರು ದೂರು ನೀಡಿದ್ದಾರೆ. ಫುಡ್ ಪಾಯಿಸನ್ ನಿಂದ ಈ ರೀತಿ ಆಗಿರಬಹುದೆಂದು ಶಂಕಿಸಲಾಗಿದೆ.
ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯಡಿಯಲ್ಲಿ ಆಹಾರ ವಿಷದ ಆರೋಪ ಹೊತ್ತಿರುವ ಹೋಟೆಲ್ಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.ಇತ್ತೀಚೆಗೆ ಕೊಟ್ಟಾಯಂನಲ್ಲಿ ಮೆಡಿಕಲ್ ಕಾಲೇಜಿನ ನರ್ಸ್ ಯೊಬ್ಬರು ಫುಡ್ ಪಾಯಿಸನ್ ನಿಂದ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ