Mathura ಈದ್ಗಾ ಸಂಕೀರ್ಣದ ಸರ್ವೇಗೆ ತಡೆ ಮುಂದುವರಿಸಲು ಸುಪ್ರೀಂ ಆದೇಶ
Team Udayavani, Jan 29, 2024, 5:31 PM IST
ಹೊಸದಿಲ್ಲಿ: ಮಥುರಾದ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯದ ಮೇಲ್ವಿಚಾರಣೆಯ ಸರ್ವೇಗಾಗಿ ಅಲಹಾಬಾದ್ ಹೈಕೋರ್ಟ್ ಆದೇಶದ ಕಾರ್ಯಾಚರಣೆಗೆ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಕಮಿಟಿ ಆಫ್ ಮ್ಯಾನೇಜ್ಮೆಂಟ್ ಟ್ರಸ್ಟ್ ಶಾಹಿ ಮಸೀದಿ ಈದ್ಗಾ ಸಲ್ಲಿಸಿದ ಮನವಿಯನ್ನು ಎಪ್ರಿಲ್ ಮೊದಲಾರ್ಧದಲ್ಲಿ ಹೆಚ್ಚಿನ ವಿಚಾರಣೆಗೆ ಮುಂದೂಡಿದೆ. ಮಂಜೂರು ಮಾಡಿದ ಮಧ್ಯಂತರ ಆದೇಶಗಳು ಮುಂದುವರಿಯಲಿದ್ದು, ಎಪ್ರಿಲ್ ಮೊದಲಾರ್ಧದಲ್ಲಿ ಮರು-ಪಟ್ಟಿ ಮಾಡಿ ಅದರೊಳಗೆ ಮನವಿಗಳನ್ನು ಪೂರ್ಣಗೊಳಿಸಲು ಕಕ್ಷಿದಾರರಿಗೆ ನಿರ್ದೇಶಿಸಿದೆ. ತನ್ನ ಮುಂದೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಎಪ್ರಿಲ್ನಲ್ಲಿ ಒಟ್ಟಿಗೆ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.
2023ರ ಡಿಸೆಂಬರ್ 14ರಂದು ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯದ ಮೇಲ್ವಿಚಾರಣೆಯ ಸಮೀಕ್ಷೆಗೆ ಅನುಮತಿ ನೀಡಿ ಆದೇಶದ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಜನವರಿ 16ರಂದು ತಡೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ