ಮುಜಫರನಗರ: ಮನೆ ಗೋಡೆ ಕುಸಿದು ಕಾರ್ಮಿಕ ಸಾವು
Team Udayavani, Jan 1, 2018, 4:38 PM IST
ಮುಜಫರನಗರ: ಮುಜಫರ ನಗರ ಜಿಲ್ಲೆಯ ಛಾಪಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾ ಗ್ರಾಮದಲ್ಲಿ ದುರಸ್ತಿ ಹಂತದಲ್ಲಿದ್ದ ಮನೆಯೊಂದರ ಗೋಡೆ ಕುಸಿದು 40 ವರ್ಷ ಪ್ರಾಯದ ಕಾರ್ಮಿಕರೊಬ್ಬರು ಮೃತಪಟ್ಟು ಇತರ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಮೃತ ಕಾರ್ಮಿಕನನ್ನು ಶಹನವಾಜ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.