Jammu- Kashmir: ಎರಡು ಪ್ರತ್ಯೇಕ ಎನ್ಕೌಂಟರ್; ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ
Team Udayavani, May 6, 2023, 9:27 AM IST
ಶ್ರೀನಗರ: ಜಮ್ಮು -ಕಾಶ್ಮೀರದ ರಾಜೌರಿ ಮತ್ತು ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಎರಡು ಪ್ರತ್ಯೇಕ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಮಾಧ್ಯಮದ ವರದಿ ಶನಿವಾರ ತಿಳಿಸಿದೆ.
ಬಾರಾಮುಲ್ಲಾ ಪ್ರದೇಶದಲ್ಲಿಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದ್ದರು. ಆ ವೇಳೆಗೆ ಉಗ್ರರು ಫೈರಿಂಗ್ ಆರಂಭಿಸಿದ್ದರಿಂದ , ಓರ್ವನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಹಲವು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿಯೂ ಭಾರತೀಯ ಸೇನಾಪಡೆಗಳು ಎನ್ಕೌಂಟರ್ ಆರಂಭಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ