ವಿಶ್ವಾದ್ಯಂತ ‘ಫಾರ್ವರ್ಡ್‌’ಗೆ ಮಿತಿ

Team Udayavani, Jan 22, 2019, 2:04 AM IST

66.jpg

ಹೊಸದಿಲ್ಲಿ: ಸುಳ್ಳು ಸುದ್ದಿಗಳು ಹಾಗೂ ವದಂತಿಗಳು ಹಬ್ಬುವುದನ್ನು ತಡೆಯಲು ವಾಟ್ಸ್‌ಆ್ಯಪ್‌ ಸಂಸ್ಥೆಯು ಭಾರತದಲ್ಲಿ ಜಾರಿಗೆ ತಂದಿದ್ದ ‘ಫಾರ್ವರ್ಡ್‌ ಸಂದೇಶಗಳ ಮಿತಿ’ಯನ್ನು ಈಗ ವಿಶ್ವಾದ್ಯಂತ ಜಾರಿಗೊಳಿಸಿದೆ. ಹೀಗಾಗಿ, ಜಗತ್ತಿನೆಲ್ಲೆಡೆಯೂ ಇನ್ನು ವಾಟ್ಸ್‌ಆ್ಯಪ್‌ ಮೂಲಕ ಫಾರ್ವರ್ಡ್‌ ಸಂದೇಶಗಳನ್ನು ಗರಿಷ್ಠ 5 ಚಾಟ್‌ಗಳಿಗಷ್ಟೇ ಸೀಮಿತ ಗೊಳಿಸಿದಂತಾಗಿದೆ. ಕಳೆದ ವರ್ಷದ ಜುಲೈನಲ್ಲೇ ಭಾರತದಲ್ಲಿ ಇದನ್ನು ಪರಿಚಯಿಸಲಾಗಿತ್ತು.

ಇದನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಿ, 6 ತಿಂಗಳುಗಳ ಕಾಲ ಬಳಕೆದಾರರ ಪ್ರತಿಕ್ರಿಯೆ ಪಡೆದು ಈ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ಈ ಮಿತಿ ಹೇರಿದ ಬಳಿಕ ಫಾರ್ವರ್ಡ್‌ ಸಂದೇಶಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

ಸೋಮವಾರದಿಂದಲೇ ಹೊಸ ನಿಯಮ ಜಾರಿಯಾಗಿದ್ದು, ವಾಟ್ಸ್‌ಆ್ಯಪ್‌ನ ಲೇಟೆಸ್ಟ್‌ ವರ್ಷನ್‌ ಬಳಕೆದಾರರು ಒಮ್ಮೆಗೆ ಕೇವಲ ಐವರಿಗೆ ಮಾತ್ರ ಫಾರ್ವರ್ಡ್‌ ಸಂದೇಶಗಳನ್ನು ಕಳುಹಿಸಲು ಸಾಧ್ಯ ಎಂದೂ ಕಂಪೆನಿ ಹೇಳಿದೆ. ಈ ಹಿಂದೆ ಒಮ್ಮೆಗೆ 20 ಮಂದಿಗೆ ಫಾರ್ವರ್ಡ್‌ ಸಂದೇಶಗಳನ್ನು ಕಳುಹಿಸಲು ಅವಕಾಶವಿತ್ತು.

ಶೇ.25 ಇಳಿಕೆ: ಪ್ರಾಯೋಗಿಕ ಅವಧಿ ಯಲ್ಲಿ ಫಾರ್ವರ್ಡ್‌ ಸಂದೇಶಗಳ ಪ್ರಮಾಣದಲ್ಲಿ ಶೇ.25ರಷ್ಟು ಇಳಿಕೆ ಕಂಡುಬಂದಿತ್ತು ಎಂದು ವಾಟ್ಸ್‌ ಆ್ಯಪ್‌ ಹೇಳಿದೆ. ಜಗತ್ತಿನಾದ್ಯಂತ ವಾಟ್ಸ್‌ಆ್ಯಪ್‌ಗೆ 1.5 ಶತಕೋಟಿ ಬಳಕೆದಾರರು ಇದ್ದು, ಆ ಪೈಕಿ ಭಾರತ, ಬ್ರೆಜಿಲ್‌, ಇಂಡೋನೇಷ್ಯಾದಂಥ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಬಳಕೆದಾರರಿದ್ದಾರೆ. ಕಳೆದ ವರ್ಷ ಮಕ್ಕಳ ಕಳ್ಳರಿದ್ದಾರೆ ಎಂಬ ಸುಳ್ಳು ಸುದ್ದಿಯು ಭಾರತದ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ ಪರಿಣಾಮ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈದಂಥ ಅಮಾನವೀಯ ಘಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಸರಕಾರವು ಸುಳ್ಳು ಸುದ್ದಿಗಳನ್ನು ತಡೆಯಲು ಕಠಿಣ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಿಗೆ ನಿರ್ದೇಶನ ನೀಡಿತ್ತು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.