ಎಲ್ಜೆಪಿ-ಬಿಜೆಪಿ ನಡುವೆ ಸೀಟು ಹಂಚಿಕೆ ಅಂತಿಮ
Team Udayavani, Dec 22, 2018, 8:25 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗಾಗಿ ಸ್ಥಾನ ಹಂಚಿಕೆ ನಿಟ್ಟಿನಲ್ಲಿ ಮುನಿಸಿಕೊಂಡಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ರನ್ನು ಸಮಾಧಾನಪಡಿಸುವಲ್ಲಿ ಬಿಜೆಪಿ ಗೆದ್ದಿದೆ. ಆರ್ಎಲ್ಎಸ್ಪಿ ಯುಪಿಎ ಸೇರ್ಪಡೆಯಾಗಿದ್ದರಿಂದ ಎಲ್ಜೆಪಿಗೆ 6 ಲೋಕಸಭಾ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆಗಳಾಗಿವೆ. ಸಚಿವ ಅರುಣ್ ಜೇಟ್ಲಿ, ರಾಮ್ ವಿಲಾಸ್ ಪಾಸ್ವಾನ್, ಸಂಸದ ಚಿರಾಗ್ ಪಾಸ್ವಾನ್ ನಡುವಿನ ಮಾತುಕತೆ ವೇಳೆ ಈ ಚರ್ಚೆ ನಡೆದಿದೆ. ಈ ಬಗ್ಗೆ ಶನಿವಾರ ಅಧಿಕೃತ ಘೋಷಣೆ ಮಾಡಲಾಗುತ್ತದೆ. ಸೂತ್ರದ ಪ್ರಕಾರ ಪಾಸ್ವಾನ್ಗೆ ರಾಜ್ಯಸಭಾ ಸ್ಥಾನ, ಎಲ್ಜೆಪಿಗೆ ಬಿಹಾರದಲ್ಲಿ 5, ಉ.ಪ್ರ ಅಥವಾ ಝಾರ್ಖಂಡ್ನಲ್ಲಿ 1 ಸ್ಥಾನ ಹೀಗೆ ಒಟ್ಟು 7 ಸ್ಥಾನಗಳ ಡೀಲ್ ಮಾಡಲಾಗಿದೆ.
25ಕ್ಕೆ ಕೆಸಿಆರ್-ಮೋದಿ ಭೇಟಿ: ಫೆಡರಲ್ ಫ್ರಂಟ್ ರಚಿಸಲು ಹೊರಟಿರುವ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ 25ರಂದು ಪ್ರಧಾನಿ ಮೋದಿಯವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ. 25ರಿಂದ 3 ದಿನಗಳ ಕಾಲ ದೆಹಲಿಯಲ್ಲಿರುವ ರಾವ್ ಅವರು ಮಾಯಾವತಿ, ಅಖಿಲೇಶ್ರನ್ನು ಭೇಟಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ