ಮುಂಬಯಿ -ಅಹ್ಮದಾಬಾದ್ ಹೆದ್ದಾರಿ: 12,000 ಲೀಟರ್ ತೈಲ ಇದ್ದ ಟ್ಯಾಂಕರ್ ಪಲ್ಟಿ
Team Udayavani, May 22, 2022, 5:45 PM IST
ಪಾಲ್ಘರ್: ಇಲ್ಲಿನ ಮುಂಬಯಿ-ಅಹ್ಮದಾಬಾದ್ ಹೆದ್ದಾರಿಯಲ್ಲಿ ಖಾದ್ಯ ತೈಲವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಸುಮಾರು ಮೂರು ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಸೂರತ್‌ನಿಂದ ನೆರೆಯ ಮುಂಬಯಿಗೆ ಸಂಸ್ಕರಣೆಗಾಗಿ 12,000 ಲೀಟರ್ ಖಾದ್ಯ ತೈಲವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕ ನಿಯಂತ್ರಣ ಕಳೆದುಕೊಂಡು ತವಾ ಗ್ರಾಮದ ಬಳಿ ಪಲ್ಟಿಯಾಗಿ ತೈಲ ಸೋರಿಕೆಯಾಗಿದೆ. ಇದೇ ವೇಳೆ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಸಿಕ್ಕ ಸಿಕ್ಕ ಪಾತ್ರೆ, ಕ್ಯಾನ್‌ಗಳಲ್ಲಿ ತೈಲವನ್ನು ತುಂಬಿಸಿ ಕೊಂಡೊಯ್ದಿದ್ದಾರೆ.
ಇದನ್ನೂ ಓದಿ:ಇನ್ಫೋಸಿಸ್ ಸಿಇಒ ಮತ್ತು ಎಂಡಿ ಆಗಿ ಸಲೀಲ್ ಪರೇಖ್ ಮರು ನೇಮಕ
ಘಟನೆ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಸ್ಥಳಕ್ಕೆ ಆಗಮಿಸಿದ ಪೋಲಿಸರು ಜನಸಂದಣಿ ಹಾಗೂ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು, ಸ್ಥಳೀಯ ರಕ್ಷಣಾ ತಂಡವು ಟ್ಯಾಂಕರ್ ಅನ್ನು ಮಾರ್ಗದಿಂದ ತೆಗೆದುಹಾಕಿ, ರಸ್ತೆಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಆರಂಭಿಸಿತು. ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾ ರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ
ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ
Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ
ಶೀಘ್ರ ಸರಕಾರಿ ಬ್ಯಾಂಕ್ ಪೂರ್ಣ ಖಾಸಗೀಕರಣ? ಪಿಎಸ್ಬಿಗಳಿಂದ ನಿರ್ಗಮಿಸಲು ಸರಕಾರ ಸಿದ್ಧತೆ