ಲೋಕಸಭಾ ಚುನಾವಣೆ : ಪ್ರಥಮ ಹಂತದ ಮತದಾನ ಪ್ರಾರಂಭ

18 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 91 ಕ್ಷೇತ್ರಗಳಲ್ಲಿ ಮತದಾನ

Team Udayavani, Apr 11, 2019, 9:51 AM IST

ನವದೆಹಲಿ: ಉತ್ತರಪ್ರದೇಶ, ಆಂಧ್ರಪ್ರದೇಶ, ಬಿಹಾರ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳು ಸೇರಿದಂತೆ ಒಟ್ಟು 18 ರಾಜ್ಯಗಳು ಮತ್ತು ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹ ಹಾಗೂ ಲಕ್ಷದ್ವೀಪಗಳ ಮತದಾರರು ಇಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಈವರೆಗಿನ ವರದಿಗಳ ಪ್ರಕಾರ ಒಟ್ಟಾರೆ 11% ಮತದಾನವಾಗಿರುವ ಕುರಿತಾಗಿ ತಿಳಿದುಬಂದಿದೆ.

ಬೆಳಿಗ್ಗೆ 7ರಿಂದ ಸಾಯಂಕಾಲ 6ರ ತನಕ ಮತದಾನ ಮಾಡಲು ಅವಕಾಶವಿದೆ. ದೇಶದ ಈಶಾನ್ಯ ರಾಜ್ಯಗಳಲ್ಲಿ ಮತದಾನದ ಅವಧಿ ಬೆಳಿಗ್ಗೆ 7ರಿಂದ ಸಾಯಂಕಾಲ 5ರವರೆಗೆ ಇದ್ದು ಮಣಿಪುರ ಮತ್ತು ನಾಗಾಲ್ಯಾಂಡ್‌ ರಾಜ್ಯಗಳಲ್ಲಿ ಸಾಯಂಕಾಲ 4 ಗಂಟೆಗೆ ಮತದಾನದ ಅವಧಿ ಮುಕ್ತಾಯಗೊಳ್ಳುತ್ತದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತದಾನದ ಕೇಂದ್ರದ ಎದುರು ಸರತಿ ಸಾಲಿನಲ್ಲಿ ಕಾಯುತ್ತಿರುವುದು ಕಂಡುಬಂದಿದೆ. ಇನ್ನು ಉತ್ತರಪ್ರದೇಶದ ಕೆಲವು ಭಾಗಗಳಲ್ಲಿ ಇ.ವಿ.ಎಂ. ಸರಿಯಾಗಿ ಕಾರ್ಯನಿರ್ವಹಿಸದಿರುವ ಕುರಿತಾಗಿಯೂ ವರದಿಯಾಗಿದೆ.

ಇನ್ನು ಈ ಲೋಕಸಭಾ ಚುನಾವಣೆಯ ಜೊತೆಜೊತೆಗೆ ಆಂಧ್ರಪ್ರದೇಶ, ಒಡಿಸ್ಸಾ, ಸಿಕ್ಕಿಂ, ಅರುಣಾಚಲಪ್ರದೇಶ ರಾಜ್ಯಗಳಿಗೂ ಚುನಾವಣೆ ನಡೆಯುತ್ತಿದ್ದು ಈ ರಾಜ್ಯಗಳ ಮತದಾರರು ತಮ್ಮ ತಮ್ಮ ಕ್ಷೇತ್ರದ ಸಂಸದರನ್ನು ಹಾಗೂ ಶಾಸಕರನ್ನು ಆಯ್ಕೆ ಮಾಡಲು ಮತದಾನ ಮಾಡಬೇಕಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ