ಏ.26ಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ, 25ಕ್ಕೆ ಮೆಗಾ ರೋಡ್ ಶೋ

Team Udayavani, Apr 22, 2019, 2:41 PM IST

ನವದೆಹಲಿ:2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ನಡೆಯಲಿದೆ ಎಂದು ವರದಿ ತಿಳಿಸಿದೆ.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಪರಾಜಯಗೊಳಿಸಿದ್ದರು. ಈ ಬಾರಿಯೂ ಕೂಡಾ ವಾರಣಾಸಿಯಿಂದ ಅಖಾಡಕ್ಕಿಳಿಯಲಿರುವ ಮೋದಿ ಏಪ್ರಿಲ್ 25ರಂದು ಭರ್ಜರಿ ರೋಡ್ ಶೋ ನಡೆಸಲು ಉದ್ದೇಶಿಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

ನಿಗದಿತ ಸಮಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಗುರುವಾರ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪಕ್ಷದ ಮುಖಂಡರಾದ ಜೆಪಿ ನಡ್ಡಾ, ಲಕ್ಷ್ಮಣ್ ಆಚಾರ್ಯ, ಸುನೀಲ್ ಓಝಾ ಹಾಗೂ ಅಶುತೋಷ್ ಟಂಡನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಬಿಜೆಪಿ ನಾಯಕರ ಜೊತೆ ಚರ್ಚೆಯ ಬಳಿಕ ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಯಲಿದೆ. ವಾರಣಾಸಿಯ ಬನರಾಸ್ ಹಿಂದೂ ಯೂನಿರ್ವಸಿಟಿಯ ಲಂಕಾ ಗೇಟ್ ಸಮೀಪದಿಂದ ರೋಡ್ ಶೋ ಆರಂಭವಾಗಲಿದೆ. ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಹೂ ಮಾಲೆ ಅರ್ಪಣೆ ಮಾಡಿದ ನಂತರ ರೋಡ್ ಶೋಗೆ ಚಾಲನೆ ದೊರೆಯಲಿದೆ ಎಂದು ವರದಿ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ