ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು: 20ಕ್ಕೂ ಹೆಚ್ಚು ಜನರಿಗೆ ಗಾಯ

Team Udayavani, Jan 16, 2020, 9:34 AM IST

ಕಟಕ್: ಮುಂಬೈ- ಬಬುನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.

ಒಡಿಶಾ ರಾಜ್ಯದ ಕಟಕ್ ಸಮೀಪದ ಸಾಲಗಾವ್ ಮತ್ತು ನೀರ್ಗುಂಡಿ  ಮಧ್ಯಭಾಗದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಆರು ಜನರು ಗಂಭೀರವಾಗಿದ್ದಾರೆಂದು ವರದಿಯಾಗಿದೆ.

ಸ್ಥಳದಲ್ಲಿ ಮಂಜು ಕವಿದಿತ್ತು. ಇದರಿಂದಾಗಿ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕವಾಗಿ ವರದಿಯಾಗಿದೆ.

ಅಪಘಾತದಿಂದಾಗಿ ಐದು ಬೋಗಿಗಳು ಸಂಪೂರ್ಣವಾಗಿ ಹಳಿತಪ್ಪಿದ್ದು, ಉಳಿದ ಮೂರು ಬೋಗಿಗಳು ಭಾಗಶಃ ಹಳಿಯಲ್ಲಿದೆ ಎನ್ನಲಾಗಿದೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಆರಂಭವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ