ಉತ್ತರದಲ್ಲಿ ಎಸ್‌ಪಿ-ಬಿಎಸ್‌ಪಿ ಮೇಲಾಟ

Team Udayavani, Jan 25, 2019, 12:30 AM IST

w-39.jpg

ಹೊಸದಿಲ್ಲಿ: ರಾಜಕೀಯವಾಗಿ ಮಹತ್ವ ಪಡೆದಿರುವ ಉತ್ತರ ಪ್ರದೇಶದಲ್ಲಿ ಅಖೀಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಮಾಯಾವತಿ ಅವರ ಬಹುಜನ ಸಮಾಜವಾದಿ ಪಕ್ಷಗಳ (ಬಿಎಸ್‌ಪಿ) ಮೈತ್ರಿಯು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದ ಯಶಸ್ಸುಗಳಿಸಲಿದೆ ಎಂದು ಎಬಿಪಿ ನ್ಯೂಸ್‌- ಸಿ ವೋಟರ್‌ ಸಂಸ್ಥೆಗಳು ಜಂಟಿಯಾಗಿ ನಡೆಸಿರುವ ಸಮೀಕ್ಷೆಯಲ್ಲಿ ಹೇಳಲಾಗಿದೆ. 

ಕಳೆದ ವರ್ಷದ ಡಿಸೆಂಬರ್‌ 3ನೇ ವಾರದಿಂದ ಈ ವರ್ಷದ ಜನವರಿ 3ನೇ ವಾರದ ಅವಧಿಯಲ್ಲಿ “ಮಾದರಿ ವಿಧಾನ’ದ ಆಧಾರದಲ್ಲಿ ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, ಇದರ ವರದಿಯನ್ನು ಗುರುವಾರ (ಜ. 24) ಬಿಡುಗಡೆ ಮಾಡಲಾಗಿದೆ. ಅದರಂತೆ, ಉತ್ತರ ಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿಯ ಕೈಯೆ ಮೇಲಾಗಲಿದೆ ಯಾದರೂ, ಬಿಹಾರದಲ್ಲಿ ಬಿಜೆಪಿಗೆ ಬಂಪರ್‌ ಯಶಸ್ಸು ದೊರೆಯಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನ ತೀವ್ರ ಪೈಪೋಟಿಯ ನಡುವೆಯೂ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎನ್ನ‌ಲಾಗಿದೆ.

ಉತ್ತರ ಪ್ರದೇಶ : ಕೇಂದ್ರದಲ್ಲಿ ಅಧಿಕಾರ ಗದ್ದುಗೆಯನ್ನೇರ ಬಹುದಾದ ಪಕ್ಷವನ್ನು ಉತ್ತರ ಪ್ರದೇಶ ರಾಜ್ಯವೇ ಬಹುತೇಕ ನಿರ್ಧರಿಸುತ್ತದೆ. ಇದು ದೇಶದ ಅತಿ ದೊಡ್ಡ ರಾಜ್ಯವಾಗಿದ್ದು, 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಇಲ್ಲಿ 2014ರ ಚುನಾವಣೆಯಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್‌ ಕೇವಲ 2, ಸಮಾಜವಾದಿ ಪಕ್ಷ 5 ಮತ್ತು ಬಿಎಸ್‌ಪಿ ಶೂನ್ಯ ಸಾಧನೆ ಮಾಡಿತ್ತು. ಈ ಬಾರಿ ಎಸ್‌ಪಿ-ಬಿಎಸ್‌ಪಿ ಮೈತ್ರಿಯು 51 ಸ್ಥಾನ ಗೆಲ್ಲಬಹುದಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 25 ಸೀಟುಗಳನ್ನು ಮಾತ್ರ ಗೆಲ್ಲಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ, ಬುಧವಾರವಷ್ಟೇ ಕಾಂಗ್ರೆಸ್‌ ಪಕ್ಷ, ಪ್ರಿಯಾಂಕಾ ಗಾಂಧಿಯವರನ್ನು ತನ್ನ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಇದಕ್ಕೂ ಮುನ್ನವೇ ಸಮೀಕ್ಷೆ ನಡೆದಿರುವುದರಿಂದ ಉತ್ತರ ಪ್ರದೇಶದ ಮೇಲೆ “ಪ್ರಿಯಾಂಕಾ ಪರಿಣಾಮ’ವೇನು ಎಂಬುದು ಚುನಾವಣೆ ಹೊಸ್ತಿಲಲ್ಲಿ ನಡೆಯುವ ಸಮೀಕ್ಷೆಗಳ ಮೂಲಕ ಗೊತ್ತಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬಿಹಾರದಲ್ಲಿ ಎನ್‌ಡಿಎಗೆ ಲಾಭ: ಬಿಹಾರದಲ್ಲಿ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಸಹಯೋಗ ಬಿಜೆಪಿಗೆ ಹೆಚ್ಚು ವರದಾನ. ಹಾಗಾಗಿ, ಒಟ್ಟು 40 ಸ್ಥಾನಗಳಲ್ಲಿ ಬಿಜೆಪಿ 35ರಲ್ಲಿ ಜಯ ಗಳಿಸುವ ಸಾಧ್ಯತೆಗಳಿದ್ದು, 5 ಸ್ಥಾನಗಳು ಯುಪಿಎ ಪಾಲಾಗಲಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನ ಗೆದ್ದಿದ್ದರೆ, ಎಲ್‌ಜೆಪಿ 6, ಆರ್‌ಜೆಡಿ 4, ರಾಷ್ಟ್ರೀಯ ಲೋಕ ಸಮತಾ ಪಾರ್ಟಿ 3, ಜೆಡಿಯು 2, ಎನ್‌ಸಿಪಿ 1 ಹಾಗೂ ಕಾಂಗ್ರೆಸ್‌ 2 ಸ್ಥಾನ ಗೆದ್ದಿದ್ದವು. 

ಕರ್ನಾಟಕದ ಲೆಕ್ಕಾಚಾರ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಗದ್ದುಗೆಯೇರುವ ಅವಕಾಶವನ್ನು ಸ್ವಲ್ಪವೇ ಅಂತರದಿಂದ ತಪ್ಪಿಸಿಕೊಂಡ ಬಿಜೆಪಿ, ಲೋಕಸಭಾ ಕ್ಷೇತ್ರದಲ್ಲಿ ಅದೇ ಮ್ಯಾಜಿಕ್‌ ಮುಂದುವರಿಸುತ್ತದೆಯೇ ಎಂಬುದಕ್ಕೆ ಸಮೀಕ್ಷೆ ಉತ್ತರ ನೀಡುವ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆದರೆ, ಒಟ್ಟು ಸಂಸತ್‌ ಸ್ಥಾನಗಳಲ್ಲಿ ಬಿಜೆಪಿಯು 14ರಲ್ಲಿ ಜಯ ಗಳಿಸಲಿದೆ ಎನ್ನಲಾಗಿದೆ. ಇನ್ನುಳಿದಂತೆ, ಕಾಂಗ್ರೆಸ್ಸಿಗೆ 11 ಹಾಗೂ ಇತರರಿಗೆ 3 ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 17 ಸ್ಥಾನ ಬಂದಿದ್ದರೆ, ಕಾಂಗ್ರೆಸ್‌ 9 ಹಾಗೂ ಜೆಡಿಎಸ್‌ 2 ಸ್ಥಾನ ಗೆದ್ದಿದ್ದವು. 

ಎಬಿಪಿ ನ್ಯೂಸ್‌ ಮತ್ತು ಸಿ-ವೋಟರ್‌ ಜಂಟಿಯಾಗಿ ನಡೆಸಿರುವ ಸಮೀಕ್ಷೆ
ಉತ್ತರ ಪ್ರದೇಶದಲ್ಲಿ ಫ‌ಲ ನೀಡಲಿರುವ ಅಖೀಲೇಶ್‌- ಮಾಯಾವತಿ ಮೈತ್ರಿ

ಟಾಪ್ ನ್ಯೂಸ್

ರಾಜ್ಯದೊಂದಿಗೆ ಎಐ, ಇಂಧನ, ಶಿಕ್ಷಣ ಸಹಭಾಗಿತ್ವ ಸ್ಥಾಪನೆಗೆ ಫಿನ್ಲೆಂಡ್ ಆಸಕ್ತಿ

ರಾಜ್ಯದೊಂದಿಗೆ ಎಐ, ಇಂಧನ, ಶಿಕ್ಷಣ ಸಹಭಾಗಿತ್ವ ಸ್ಥಾಪನೆಗೆ ಫಿನ್ಲೆಂಡ್ ಆಸಕ್ತಿ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸೂಡಾ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

32tmc

ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32tmc

ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

31cmsawanth

ಲೈಂಗಿಕ ಕಿರುಕುಳದ ದೂರಿನಲ್ಲಿ ಸತ್ಯಾಂಶವಿದ್ದರೆ, ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆ

ಎಲ್ಗಾರ್ ಪರಿಷತ್ ಪ್ರಕರಣ; ಮೂರು ವರ್ಷ ಜೈಲುವಾಸದ ಬಳಿಕ ಲಾಯರ್ ಸುಧಾ ಬಿಡುಗಡೆ

MUST WATCH

udayavani youtube

ಮಂಗಳೂರು: 13 ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಚೋರರ ಬಂಧನ

udayavani youtube

ಅಕಾಲಿಕ ಮಳೆಯ ಆತಂಕ.. ಯಂತ್ರದ ಮೂಲಕ ಭತ್ತದ ಒಕ್ಕಲು

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

ಹೊಸ ಸೇರ್ಪಡೆ

ರಾಜ್ಯದೊಂದಿಗೆ ಎಐ, ಇಂಧನ, ಶಿಕ್ಷಣ ಸಹಭಾಗಿತ್ವ ಸ್ಥಾಪನೆಗೆ ಫಿನ್ಲೆಂಡ್ ಆಸಕ್ತಿ

ರಾಜ್ಯದೊಂದಿಗೆ ಎಐ, ಇಂಧನ, ಶಿಕ್ಷಣ ಸಹಭಾಗಿತ್ವ ಸ್ಥಾಪನೆಗೆ ಫಿನ್ಲೆಂಡ್ ಆಸಕ್ತಿ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸೂಡಾ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

ಚಳಿಗಾಲ ಅಧಿವೇಶನ ಅಚ್ಚುಕಟ್ಟಾಗಿ ನಿರ್ವಹಿಸಿ

ಚಳಿಗಾಲ ಅಧಿವೇಶನ ಅಚ್ಚುಕಟ್ಟಾಗಿ ನಿರ್ವಹಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.