ತಮಿಳುನಾಡು ಮಹಿಳೆಯರ‌ ಮಲೆ ಪ್ರವೇಶ ಯತ್ನ ವಿಫ‌ಲ


Team Udayavani, Dec 24, 2018, 6:00 AM IST

pti12232018000066b.jpg

ತಿರುವನಂತಪುರಂ: ಶಬರಿಮಲೆ ದೇಗುಲ ಪ್ರವೇಶಿಸಲು ಪೊಲೀಸ್‌ ಭದ್ರತೆಯಲ್ಲಿ ಆಗಮಿಸಿದ್ದ ತಮಿಳುನಾಡಿನ ಮನಿತಿ ಸಂಘಟನೆಯ 11 ಮಹಿಳೆಯರನ್ನು ಪ್ರತಿಭಟನಾಕಾರರು ತಡೆದಿದ್ದು, ಪ್ರವೇಶ ಸಾಧ್ಯವಾಗದೇ ಮಹಿಳೆಯರು ವಾಪಸಾಗಿದ್ದಾರೆ. ಆದರೆ ಅವರು ತಮಿಳುನಾಡಿಗೆ ಇನ್ನೂ ಹಿಂದಿರುಗದೆ, ದರ್ಶನ ಮಾಡಿಯೇ ವಾಪಸಾಗುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಮಹಿಳೆಯರು ಭಾನುವಾರ ಬೆಳಗ್ಗೆ ದೇಗುಲ ಪ್ರವೇಶಿಸಲು ಆಗಮಿಸಿದಾಗ ಪ್ರತಿಭಟನಾಕಾರರು ಅವರನ್ನು ತಡೆದಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ಬಂಧಿಸಲು ಪೊಲೀಸರು ಮುಂದಾದಾಗ ಘರ್ಷಣೆ ಉಂಟಾಗಿದ್ದು, ಜೀವ ಬೆದರಿಕೆಯಿಂದಾಗಿ ಮಹಿಳೆಯರು ನಿರ್ಗಮಿಸಿದ್ದಾರೆ. ಪ್ರತಿಭಟನಾಕಾರರು ಹಿಂಸಾಕೃತ್ಯಕ್ಕೆ ಇಳಿಯಬಹುದಾದ ಸಾಧ್ಯತೆಯಿದ್ದುದರಿಂದ ತಕ್ಷಣವೇ ಮಹಿಳೆಯರಿಗೆ ಸಮೀಪದ ಗಾರ್ಡ್‌ ರೂಮ್‌ನಲ್ಲಿ ರಕ್ಷಣೆ ಒದಗಿಸಲಾಯಿತು. 

ಮನವೊಲಿಸಲು ಪೊಲೀಸರು ಪ್ರಯತ್ನಿಸಿದ್ದರೂ, ಈ ಮಹಿಳೆಯರು ದೇಗುಲ ಪ್ರವೇಶಿಸಲು ನಿರ್ಧರಿಸಿದರು. ನಿಷೇಧಾಜ್ಞೆಯ ನಡುವೆಯೂ ಭಾರೀ ಸಂಖ್ಯೆಯಲ್ಲಿ ನೆರೆ ದಿದ್ದ ಭಕ್ತರು ಮಹಿಳೆಯರನ್ನು ತಡೆದರು. 10 ರಿಂದ 50 ವರ್ಷದೊಳಗಿನ ಮಹಿಳೆಯರಿಗೂ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ನೀಡಿದ ನಂತರ ಹಲವು ಬಾರಿ ಮಹಿಳೆಯರು ದೇಗುಲ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ ಪ್ರತಿ ಬಾರಿಯೂ ಪ್ರತಿಭಟನಾಕಾರರು ಇದಕ್ಕೆ ಅಡ್ಡಿ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಮೇಲೆ ಬಿಜೆಪಿ ಆರೋಪ:
ಮಹಿಳೆಯರನ್ನು ದೇಗುಲಕ್ಕೆ ಕಳುಹಿಸುವಲ್ಲಿ ಸಿಪಿಎಂ ನೇತೃತ್ವದ ಸರ್ಕಾರದ ಪಾತ್ರವಿದೆ ಎಂದು ಬಿಜೆಪಿ ಆರೋಪಿಸಿದೆ. ಅಷ್ಟೇ ಅಲ್ಲ, ಸರ್ಕಾರವೇ ಈ ಮಹಿಳೆಯರನ್ನು ಪೊಲೀಸರ ರಕ್ಷಣೆಯಲ್ಲಿ ದೇಗುಲಕ್ಕೆ ಕಳುಹಿಸುತ್ತಿದೆ ಎಂದು ಪಂದಳಂ ರಾಜಮನೆತನದ ಸದಸ್ಯರು ಆರೋಪಿಸಿದ್ದಾರೆ. ಹೈಕೋರ್ಟ್‌ ನೇಮಿಸಿದ ಮೂವರು ಸದಸ್ಯರ ಸಮಿತಿಯು ಈ ವಿಚಾರವನ್ನು ಪರಿಗಣಿಸಿ ವರದಿ ನೀಡಬೇಕು. ಅದಕ್ಕೆ ಅನುಗುಣವಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಇದೇ ವೇಳೆ, ನಕ್ಸಲ್‌ ಮನಸ್ಥಿತಿಯ ಕೆಲವರು ಮಹಿಳೆಯರಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು

ಗುಣಮಟ್ಟದ ಉನ್ನತ ಶಿಕ್ಷಣವು ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ವಿಶಿಷ್ಟ ಲಕ್ಷಣ-ಉಪರಾಷ್ಟ್ರಪತಿ

Covidಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,156ಕೋವಿಡ್ ಪ್ರಕರಣ ಪತ್ತೆ, 733 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,156ಕೋವಿಡ್ ಪ್ರಕರಣ ಪತ್ತೆ, 733 ಮಂದಿ ಸಾವು

MUST WATCH

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

ಹೊಸ ಸೇರ್ಪಡೆ

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

shivamogga news

ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.