ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ
Team Udayavani, May 22, 2022, 10:31 PM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದ ನಂತರ ಧಾರ್ಮಿಕ ಸ್ಥಳಗಳಿಂದ ಕೆಳಗಿಳಿಸಲಾಗುತ್ತಿರುವ ಧ್ವನಿವರ್ಧಕಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಿಸಲಾಗುತ್ತಿದೆ.
ಗೋರಖ್‌ಪುರ, ಸಂಗಂ ಜಿಲ್ಲೆಗಳಲ್ಲಿ ಈಗಾಗಲೇ ಈ ಕಾರ್ಯ ಆರಂಭವಾಗಿದ್ದು, ಮುಂದಿನ ವಾರದಲ್ಲಿ ತಾವೂ ಈ ಕೆಲಸ ಮಾಡುವುದಾಗಿ ಲಕ್ನೋ ಜಿಲ್ಲಾಧಿಕಾರಿ ಅಭಿಷೇಕ್ ಪ್ರಕಾಶ್ ತಿಳಿಸಿದ್ದಾರೆ.
ಈ ರೀತಿ ಹಂಚಲಾಗುತ್ತಿರುವ ಧ್ವನಿವರ್ಧಕಗಳನ್ನು ಶಾಲೆಗಳು ಸ್ಥಳೀಯರಿಗೆ ಕೆಲವು ಅಗತ್ಯ ಮಾಹಿತಿ ಹಂಚಲು, ಮಕ್ಕಳನ್ನು ಶಾಲೆಗೆ ಬರುವಂತೆ ಉತ್ತೇಜಿಸಲು, ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಬಳಸಲಿವೆ ಎಂದು ತಿಳಿಸಲಾಗಿದೆ. ನಗರ ಕ್ಷೇತ್ರದ ಗೋರಖ್‌ನಾಥ ಕನ್ಯಾ ಶಾಲೆಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಶಾಲೆಗೆ ಧ್ವನಿವರ್ಧಕ ಹಸ್ತಾಂತರಿಸುತ್ತಿರುವ ಫೋಟೋ ಹಂಚಿಕೊಂಡಿರುವ ಬಿಜೆಪಿ ಸಂಸದ ರವಿ ಕಿಶನ್, “ಗೋರಖ್‌ನಾಥ ದೇಗುಲದಿಂದ ತೆಗೆಯಲಾದ ಧ್ವನಿವರ್ಧಕವನ್ನು ಶಾಲೆಗೆ ಕೊಡುತ್ತಿರುವುದು ಪ್ರಶಂಸನೀಯ’ ಎಂದು ಬರೆದುಕೊಂಡಿದ್ದಾರೆ.
ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಸೀದಿಗಳು ಮತ್ತು ದೇಗುಲಗಳ ಮುಖ್ಯಸ್ಥರು, ಧಾರ್ಮಿಕ ಸ್ಥಳದ ಧ್ವನಿವರ್ಧಕ ಮಾತ್ರವಲ್ಲದೆ ಹೆಚ್ಚುವರಿ ಧ್ವನಿವರ್ಧಕಗಳನ್ನೂ ಶಾಲೆಗಳಿಗೆ ಕೊಡುಗೆ ನೀಡಲಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇರಳ: ಸಂವಿಧಾನ ವಿರೋಧಿ ಹೇಳಿಕೆ:ಭಾರೀ ಆಕ್ರೋಶದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಾಜಿ ರಾಜೀನಾಮೆ
ಮುಂಬಯಿಯಲ್ಲಿ ಮುಂದುವರಿದ ವರ್ಷಧಾರೆ; ಭೂಕುಸಿತ-ತಗ್ಗುಪ್ರದೇಶ ಜಲಾವೃತ, ಟ್ರಾಫಿಕ್ ಜಾಮ್
ಗೋವಾ ರಾಜ್ಯಾದ್ಯಂತ ಭಾರಿ ಮಳೆ ; ಜನಜೀವನ ಅಸ್ತವ್ಯಸ್ಥ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ; ಉಪರಾಷ್ಟ್ರಪತಿಯಾಗಿ ಆಯ್ಕೆ?
ಕಾಳಿ ಮಾತೆ ವಿರುದ್ಧ ಹೇಳಿಕೆ:ಟಿಎಂಸಿಯಿಂದ ಮೊಯಿತ್ರಾ ಉಚ್ಛಾಟಿಸಿ: ಮಮತಾಗೆ ಬಿಜೆಪಿ ಗಡುವು
MUST WATCH
ಹೊಸ ಸೇರ್ಪಡೆ
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್