ಹಿಮಾಚಲ ಪ್ರದೇಶ: 3.5 ಅಂಕಗಳ ಕಡಿಮೆ ತೀವ್ರತೆಯ ಭೂಕಂಪ
Team Udayavani, Feb 13, 2019, 6:56 AM IST
ಶಿಮ್ಲಾ : ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಇಂದು ಬುಧವಾರ ಬೆಳಗ್ಗೆ 7.35ರ ಹೊತ್ತಿಗೆ 3.5 ಅಂಕಗಳ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದಿಂದಾಗಿ ಯಾವುದೇ ಜೀವ ಹಾನಿ, ಸೊತ್ತು ನಾಶ, ನಷ್ಟ ಉಂಟಾದ ವರದಿ ಈ ವರೆಗೆ ಬಂದಿಲ್ಲ.
ಧರ್ಮಶಾಲಾ ಪಟ್ಟಣದಿಂದ ಉತ್ತರಕ್ಕೆ ಐದು ಕಿ.ಮೀ. ನೆಲದಾಳದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತೆಂದು ಶಿಮ್ಲಾದಲ್ಲಿ ಹವಾಮಾನ ಕೇಂದ್ರದ ನಿರ್ದೇಶಕ ಮನಮೋಹ್ ಸಿಂಗ್ ತಿಳಿಸಿದರು.
ಕಾಂಗ್ರಾ ಜಿಲ್ಲೆಯಾದ್ಯಂತ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರಾ ಜಿಲ್ಲೆ ಸಹಿತ ಹಿಮಾಚಲ ಪ್ರದೇಶದ ಬಹು ಭಾಗ ಭೂಕಂಪ ವಲಯವೆಂದು ಪರಿಗಣಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ