ಲಕ್ನೋ: ಗರ್ಭಪಾತ, ಮತಾಂತರಗೊಳ್ಳಲು ಪೀಡನೆ… ವ್ಯಕ್ತಿಯ ಬಂಧನ
Team Udayavani, Jun 29, 2023, 6:45 AM IST
ಲಕ್ನೋ: ಉತ್ತರ ಪ್ರದೇಶದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ, ಆಕೆಯನ್ನು ಥಳಿಸಿ, ಗರ್ಭಪಾತಕ್ಕೆ ಒತ್ತಾಯಿಸಿದ್ದಲ್ಲದೇ, ಇಸ್ಲಾಂಗೆ ಮತಾಂತರಗೊಳ್ಳುವಂತೆ ಪೀಡಿಸಿರುವ ಘಟನೆ ಗೋರಖಪುರದಲ್ಲಿ ವರದಿಯಾಗಿದೆ.
ಈಗಾಗಲೇ ಮದುವೆಯಾಗಿ ವೈವಾಹಿಕ ಜೀವನದಲ್ಲಿ ಸಮಸ್ಯೆ ಎದುರಿಸಿರುವ ಮಹಿಳೆಯೊಬ್ಬರು ತಮ್ಮ 3 ವರ್ಷದ ಮಗಳಿಗಾಗಿ ಆರ್ಕೆಸ್ಟ್ರಾ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಖುರ್ಷಿದ್ ಹಶ್ಮಿ ಎಂಬವನೊಂದಿಗೆ ಸ್ನೇಹ ಬೆಳೆದಿದೆ. ಬಳಿಕ ಆತನೊಂದಿಗೆ ಮಹಿಳೆ ಸಂಬಂಧ ಹೊಂದಿದ್ದು ಗರ್ಭಿಣಿಯಾಗಿದ್ದಾರೆ. ಇದೇ ವಿಚಾರವನ್ನು ದಾಳವಾಗಿಸಿಕೊಂಡ ಹಶ್ಮಿ, ತನ್ನನ್ನು ಮದುವೆಯಾಗಬೇಕಾದಲ್ಲಿ ಗರ್ಭಪಾತ ಮಾಡಿಸಿಕೊಂಡು, ಇಸ್ಲಾಂಗೆ ಮತಾಂತರಗೊಳ್ಳುವಂತೆ ಪೀಡಿಸಿ, ಮಹಿಳೆ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ನಡೆಸಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ದೂರು ನೀಡಿ, ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ