Madhya Pradesh: ಬಸ್-ಟ್ರಕ್ ಡಿಕ್ಕಿ, 3 ಮೃತ್ಯು, 7 ಮಂದಿಗೆ ಗಾಯ
Team Udayavani, Jun 17, 2023, 9:31 AM IST
ಮಧ್ಯಪ್ರದೇಶ: ಬಸ್ ಮತ್ತು ಟ್ರಕ್ ಡಿಕ್ಕಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಶನಿವಾರ ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶೈಲೇಂದ್ರ ಸಿಂಗ್ ಚೌಹಾಣ್, “ಗ್ವಾಲಿಯರ್ನಿಂದ ದೆಹಲಿಗೆ ಹೋಗುವ ಮಾರ್ಗದಲ್ಲಿ ಟ್ರಕ್ ಮತ್ತು ಪ್ರಯಾಣಿಕರ ಬಸ್ ಡಿಕ್ಕಿ ಹೊಡೆದಿದೆ. ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.”ನಾವು ಘಟನೆಯನ್ನು ಮತ್ತಷ್ಟು ಪರಿಶೀಲಿಸುತ್ತಿದ್ದೇವೆ” ಎಂದು ಅವರು ಹೇಳಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ….
ಮೇ 31ರಂದು ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು