ಆರ್ ಕೆ ನಗರ ಚುನಾವಣಾ ಫಲಿತಾಂಶ ರದ್ದು ಕೋರಿದ ಅರ್ಜಿ ವಜಾ
Team Udayavani, Jan 9, 2018, 3:19 PM IST
ಚೆನ್ನೈ : ಕಳೆದ ತಿಂಗಳಲ್ಲಿ ನಡೆದಿದ್ದ ಆರ್ ಕೆ ನಗರ ಉಪ ಚುನಾವಣೆಯ ಫಲಿತಾಂಶವನ್ನು ರದ್ದು ಮಾಡುವಂತೆ ಭಾರತದ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಇಂದು ಮಂಗಳವಾರ ವಜಾ ಮಾಡಿದೆ.
ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಅದನ್ನು ರದ್ದು ಮಾಡುವಂತೆ ಚುನಾವಣಾ ಆಯೋಗವನ್ನು ನ್ಯಾಯಾಲಯ ಕೇಳಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನನಗರದ ವಕೀಲ ಎಸ್ ವಿ ರಾಮ ಮೂರ್ತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾ ಮಾಡಿದ ಮುಖ್ಯ ನ್ಯಾಯಾಧೀಶೆ ಇಂದಿರಾ ಬ್ಯಾನರ್ಜಿ ನೇತೃತ್ವದ ಪ್ರಥಮ ಪೀಠವು, ”ಈ ರೀತಿಯ ಪರಿಹಾರಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ” ಎಂದು ಹೇಳಿದರು.
ಕಳೆದ ಡಿ.24ರಂದು ಪ್ರಕಟವಾಗಿದ್ದ ಆರ್ ಕೆ ನಗರ ಉಪ ಚುನಾವಣಾ ಫಲಿತಾಂಶದಲ್ಲಿ ಎಐಎಡಿಎಂಕೆಯ ಬದಿಗೊತ್ತಲ್ಪಟ್ಟಿದ್ದ ನಾಯಕ ಟಿ ಟಿ ವಿ ದಿನಕರನ್ ಜಯ ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್