
ಗೋ ಹತ್ಯೆ ನಿಷೇಧಕ್ಕೆ 4 ವಾರಗಳ ತಡೆಯಾಜ್ಞೆ; ಮದ್ರಾಸ್ ಹೈಕೋರ್ಟ್
Team Udayavani, May 30, 2017, 4:49 PM IST

ಮದುರೈ/ಚೆನ್ನೈ: ವಧೆಗಾಗಿ ಜಾನುವಾರುಗಳನ್ನು ಮಾರುಕಟ್ಟೆಯಲ್ಲಿ ಖರೀದಿಸುವ ಮತ್ತು ಮಾರಾಟ ಮಾಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಹೇರಿದ್ದ ನಿಷೇಧಕ್ಕೆ ಮದ್ರಾಸ್ ಹೈಕೋರ್ಟ್ ನ ಮದುರೈ ಪೀಠ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಮೇ 23ರ ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕೆಂದು ಕೋರಿ ಸೆಲ್ವಗೋಮತಿ ಹಾಗೂ ಆಶಿಕ್ ಎಲಾಹಿ ಬಾಬಾ ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿದ ಮದುರೈ ವಿಭಾಗೀಯ ಪೀಠದ ನ್ಯಾ.ಎಂ.ವಿ.ಮುರಳಿಧರನ್ ಹಾಗೂ ನ್ಯಾ.ಸಿವಿ ಕಾರ್ತಿಕೇಯನ್ ಅವರು ತಾತ್ಕಾಲಿಕ ತಡೆಯಾಜ್ಞೆಯ ಮಧ್ಯಂತರ ಆದೇಶವನ್ನು ನೀಡಿದ್ದಾರೆ.
ಆಹಾರ ಸೇವನೆ ವಿಷಯ ಮನುಷ್ಯನ ವೈಯಕ್ತಿಕ ಹಕ್ಕು. ಹಾಗಾಗಿ ಆಹಾರ ಸೇವನೆ ವಿಷಯದಲ್ಲಿ ಯಾರೊಬ್ಬರೂ ಹೇಳಿಕೊಡಬೇಕಾದ ಯಾವುದೇ ಅಗತ್ಯತೆ ಇಲ್ಲ ಎಂದು ಪಿಐಎಲ್ ನಲ್ಲಿ ವಾದಿಸಲಾಗಿದೆ. ಕೇಂದ್ರ ಸರ್ಕಾರ ವಧೆಗಾಗಿ ಜಾನುವಾರುಗಳನ್ನು ಮಾರುಕಟ್ಟೆಯಲ್ಲಿ ಖರೀದಿಸುವ ಮತ್ತು ಮಾರಾಟ ಮಾಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದು ಸರಿಯಲ್ಲ ಎಂದು ತಿಳಿಸಿದೆ.
ಆದರೆ ಕೇಂದ್ರ ಸರ್ಕಾರದ ಪರ ವಕೀಲರು ಕೇಂದ್ರ ಸರ್ಕಾರ ಜಾನುವಾರ ಮಾರುಕಟ್ಟೆಯಲ್ಲಿನ ಖರೀದಿ ಮತ್ತು ಮಾರಾಟಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ ಎಂದು ವಾದಿಸಿದರು. ವಾದ, ಪ್ರತಿವಾದ ಆಲಿಸಿದ ಪೀಠ, ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್ ಮೇಲೆ ಉರುಳಿ ಬಿದ್ದ ಸಿಮೆಂಟ್ ಬಲ್ಕರ್ ವಾಹನ; 7 ಮಂದಿ ಮೃತ್ಯು

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
