ಮಹಾರಾಷ್ಟ್ರ ಮಗುವಿನ 16 ಕೋಟಿ ರೂ. ಬೆಲೆಯ ಇಂಜೆಕ್ಷನ್ ಉಚಿತ ನೀಡಿದ ಅಮೆರಿಕ ಕಂಪನಿ


Team Udayavani, Aug 3, 2021, 2:03 PM IST

ddrrtyt

ನಾಸಿಕ್: ಆನುವಂಶಿಕ ಕಾಯಿಲೆ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿದ್ದ ಎರಡು ವರ್ಷದ ಮಗುವಿಗೆ ಬೇಕಾಗಿದ್ದ 16 ಕೋಟಿ ರೂ. ಮೌಲ್ಯದ ಇಂಜೆಕ್ಷನ್ ವೊಂದನ್ನು ಅಮೆರಿಕ ಮೂಲಕ ಕಂಪನಿಯೊಂದು ಉಚಿತವಾಗಿ ನೀಡಿದೆ. ಈ ಮೂಲಕ ಪುಟ್ಟ ಕಂದನ ಪ್ರಾಣ ಉಳಿಸಲು ಸಹಕರಿಸಿದೆ.

ಮಹಾರಾಷ್ಟ್ರದ ನಾಸಿಕ್‌ನ ಮಗು ಶಿವರಾಜ್ ದವಾರೆಯ ಮಾರಕ ಕಾಯಿಲೆಯಿಂದ ಬಳಲುತ್ತಿತ್ತು. ಈ ಕಂದನ ಜೀವ ಉಳಿಸುವ 16 ಕೋಟಿ ರೂ ಮೌಲ್ಯದ ಇಂಜೆಕ್ಷನ್ ಅನ್ನು ಅಮೆರಿಕದ ಸಂಸ್ಥೆಯೊಂದು ಉಚಿತವಾಗಿ ನೀಡುತ್ತಿದೆ. ಲಕ್ಕಿ ಡ್ರಾದಲ್ಲಿ ಈ ಕೊಡುಗೆ ಲಭ್ಯವಾಗಿದ್ದು, ಈ ರೀತಿ ಉಚಿತ ಇಂಜೆಕ್ಷನ್ ಪಡೆಯುತ್ತಿರುವ ಭಾರತದ ಮೊದಲ ರೋಗಿ ಎನಿಸಿಕೊಂಡಿದ್ದಾನೆ.

2019 ಆಗಸ್ಟ್ 8 ರಂದು ಜನಿಸಿರುವ ಶಿವರಾಜ್, ಬಹು ಅಪರೂಪದ ಕಾಯಿಲೆ ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ (ಎಸ್‌ಎಂಎ) ಎಂಬ ಕಾಯಿಲೆಯಿಂದ ಬಳಲುತ್ತಿದ್ದ. ಈತನ ತಂದೆ ವಿಶಾಲ್ ದವಾರೆ ಮತ್ತು ತಾಯಿ ಕಿರಣ ಅವರು ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ವಿಶಾಲ್ ನಾಸಿಕ್ ದಲ್ಲಿ ಪುಟ್ಟದೊಂದು ಫೋಟೊ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಮಗನ ಈ ಅಪರೂಪದ ಕಾಯಿಲೆ ಹಾಗೂ ಅದರ ಇಂಜೆಕ್ಷನ್‌ಗೆ ತಗುಲುವ ಭಾರಿ ವೆಚ್ಚ ಈ ಪೋಷಕರನ್ನು ಕಂಗಾಲಾಗುವಂತೆ ಮಾಡಿತ್ತು.

ಮಗುವಿನಲ್ಲಿರುವ ರೋಗ ಪತ್ತೆಯಾದ ಬಳಿಕ ಶಿವರಾಜ್‌ನನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ನರರೋಗತಜ್ಞ ಡಾ. ಬೃಜೇಶ್ ಉದಾನಿ ಅವರು ಶಿವರಾಜ್ ಜೀವ ಉಳಿಸಲು ಜೊಲ್ಗೆನ್‌ಸ್ಮಾ ಇಂಜೆಕ್ಷನ್ ಒಂದೇ ಆಯ್ಕೆ ಎಂದಿದ್ದರು. ಆದರೆ ಅದನ್ನು ಪಡೆಯುವಷ್ಟು ಹಣ ಈ ಮಗುವಿನ ಪೋಷಕರ ಬಳಿ ಇರಲಿಲ್ಲ.

ಅಮೆರಿಕ ಮೂಲದ ಕಂಪೆನಿಯೊಂದು ಕ್ಲಿನಿಕಲ್ ಪ್ರಯೋಗಗಳನ್ನು ಮಾಡುವುದಕ್ಕಾಗಿ ನಡೆಸುವ ಲಾಟರಿ ಯೋಜನೆಗೆ ಅರ್ಜಿಸಲ್ಲಿಸುವಂತೆ ವೈದ್ಯರು ಆ ಕುಟುಂಬಕ್ಕೆ ಸಲಹೆ ನೀಡಿದ್ದರು. ಅದೃಷ್ಟವಿದ್ದರೆ ಆ ಇಂಜೆಕ್ಷನ್ ಉಚಿತವಾಗಿ ಸಿಗಬಹುದು ಎಂದು ಅವರು ಹೇಳಿದ್ದರು. 2020ರ ಡಿಸೆಂಬರ್ 25ರಂದು ನಡೆದ ಲಕ್ಕಿ ಡ್ರಾದಲ್ಲಿ ಶಿವರಾಜ್ ಹೆಸರು ಬಂದಿತ್ತು. 2021ರ ಜನವರಿ 19ರಂದು ಪುಟಾಣಿಗೆ ಇಂಜೆಕ್ಷನ್ ನೀಡಲಾಗಿತ್ತು.

ಏನಿದು ಕಾಯಿಲೆ ?

‘ಬೆನ್ನುಮೂಳೆಯ ಸ್ನಾಯು ಕ್ಷೀಣತೆ’ ಒಂದು ಆನುವಂಶಿಕ ಕಾಯಿಲೆ. 10,000ದಲ್ಲಿ ಒಂದು ಮಗುವಿಗೆ ಈ ಕಾಯಿಲೆ ಬರಬಹುದು. ಮಗುವಿನ ಚಲನೆ ನಿಧಾನವಾಗುತ್ತದೆ ಮತ್ತು ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಇದರಿಂದ ಮಗು ಸಾಯಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

MUST WATCH

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

ಹೊಸ ಸೇರ್ಪಡೆ

davanagere news

ವಿದ್ಯಾರ್ಥಿಗಳಿಗೆ ಮಧ್ಯಾಹದ ಬಿಸಿಯೂಟ ಪುನಾರಂಭ

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

covid news

ಲಸಿಕೆ ವಿತರಣೆಯಲ್ಲಿ  ಭಾರತವೇ ನಂ.1

ಅವಿಶ್ವಾಸ ಗೊತ್ತುವಳಿಯಲ್ಲಿ ಶಿಮುಲ್ ಅಧ್ಯಕ್ಷರಿಗೆ ಸೋಲು:  ಪ್ರಭಾರ ಅಧ್ಯಕ್ಷರ ನೇಮಕ

ಅವಿಶ್ವಾಸ ಗೊತ್ತುವಳಿಯಲ್ಲಿ ಶಿಮುಲ್ ಅಧ್ಯಕ್ಷರಿಗೆ ಸೋಲು: ಪ್ರಭಾರ ಅಧ್ಯಕ್ಷರ ನೇಮಕ

davanagere news

ಸಿಎಂ ಬೊಮ್ಮಾಯಿ ಬಹಿರಂಗ ಕ್ಷಮೆಯಾಚಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.