ಬಿಜೆಪಿ ನೇತೃತ್ವದ ಎನ್‌ಡಿಎ ಮಹಾಘಟಬಂಧನದೆದುರು ಧೂಳಿಪಟ: ಶತ್ರುಘ್ನ ಸಿನ್ಹಾ

Team Udayavani, May 17, 2019, 5:11 PM IST

ಪಟ್ನಾ : ಮೋದಿ ಅಲೆ (ಲೆಹರ್‌) ಕಳೆದ ಐದು ವರ್ಷಗಳಲ್ಲಿ ದುರಂತವಾಗಿ (ಕಹರ್‌) ಪರಿಣಮಿಸಿದೆ; ಬಿಹಾರದಲ್ಲಿ ಮಹಾಘಟಬಂಧನವು ಬಿಜೆಪಿ ನೇತೃತ್ವದ ಎನ್‌ಡಿಎ ಯನ್ನು ಧೂಳೀಪಟ ಮಾಡಲಿದೆ ಎಂದು ರಾಜಕಾರಣಿಯಾಗಿ ಪರಿವರ್ತಿತ ನಟ ಶತ್ರುಘ್ನ ಸಿನ್ಹಾ ಇಂದು ಶುಕ್ರವಾರ ಹೇಳಿದ್ದಾರೆ.

ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದೆದುರು ಕಾಂಗ್ರೆಸ್‌ ಪ್ರತ್ಯೇಕವಾಗಿ ಹೋರಾಡುತ್ತಿರುವ ಹೊರತಾಗಿಯೂ ನೆರೆಯ ಉತ್ತರ ಪ್ರದೇಶದಲ್ಲಿ ಕೂಡ ಬಿಜೆಪಿ ಧೂಳೀಪಟವಾಗಲಿದೆ ಎಂದು ಶತ್ರುಘ್ನಸಿನ್ಹಾ ಹೇಳಿದರು.

ಉತ್ತರ ಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿಯಾಗಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ.

ಬಿಹಾರದ ಪಟ್ನಾ ಸಾಹಿಬ್‌ ಕ್ಷೇತ್ರದಿಂದ ಶತ್ರುಘ್ನ ಸಿನ್ಹಾ ಅವರು ಕಾಂಗ್ರೆಸ್‌ ಟಿಕೆಟ್‌ ನಿಂದ ಸ್ಪರ್ಧಿಸುತ್ತಿದ್ದಾರೆ. ಇವರ ಎದುರು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ, ರವಿಶಂಕರ್‌ ಪ್ರಸಾದ್‌ ಸ್ಪರ್ಧಿಸುತ್ತಿದ್ದಾರೆ. ಮೇ 19ರ ಭಾನುವಾರ ಇಲ್ಲಿ ಮತದಾನ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ