ಚುನಾವಣೆ ಫ‌ಲಿತಾಂಶ ವಾದ-ವಿವಾದ: ಮಹಾರಾಷ್ಟ್ರ BJP ಕಾರ್ಯಕರ್ತನ ಕೊಲೆ

Team Udayavani, May 25, 2019, 4:48 PM IST

ಮುಂಬಯಿ : ಈಚೆಗೆ ಮುಗಿದಿರುವ ಲೋಕಸಭಾ ಚುನಾವಣೆಯ ಫ‌ಲಿತಾಂಶದ ಬಗ್ಗೆ ವಾದ-ವಿವಾದ ನಡೆಯುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನನ್ನು ಜನರ ಗುಂಪೊಂದು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.

ಅಕೋಲಾ ಜಿಲ್ಲೆಯ ಮೊಹಲ್ಲಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಿಜೆಪಿಯ ಅಲ್ಪ ಸಂಖ್ಯಾಕ ದಳದ ಕಾರ್ಯಕರ್ತ ಮತೀನ್‌ ಪಟೇಲ್‌ ಅವರು ತನ್ನದೇ ಸಮುದಾಯದ, ಆದರೆ ಎದುರಾಳಿ ರಾಜಕೀಯ ಪಕ್ಷಕ್ಕೆ ಸೇರಿದ ಗುಂಪಿನ ಜತೆಗೆ ಚುನಾವಣಾ ಫ‌ಲಿತಾಂಶದ ಬಗ್ಗೆ ವಾದಿಸುತ್ತಿದ್ದಾಗ ಸಮೂಹದ ಸುಮಾರು 8ರಿಂದ 10 ಮಂದಿ ಆತನನ್ನು ಹೊಡೆದು ಕೊಂದರೆಂದು ಪೊಲೀಸರು ತಿಳಿಸಿದರು.

ಮತೀನ್‌ ಪಟೇಲ್‌ ಅವರ 55ರ ಹರೆಯದ ಸಹೋದರನ ಮೇಲೂ ಈ ಗುಂಪು ಹಲ್ಲೆ ನಡೆಸಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ