ಏಕನಾಥ ಶಿಂಧೆ ಪರ 50ಕ್ಕೂ ಹೆಚ್ಚು ಶಾಸಕರು: ಮಹಾ ಪತನ ನಿಶ್ಚಿತ

ಅನರ್ಹತೆ ನೋಟಿಸ್‌ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ: ಇಂದು ಮಧ್ಯಾಹ್ನ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ

Team Udayavani, Jun 25, 2022, 6:20 AM IST

ಏಕನಾಥ ಶಿಂಧೆ ಪರ 50ಕ್ಕೂ ಹೆಚ್ಚು ಶಾಸಕರು: ಮಹಾ ಪತನ ನಿಶ್ಚಿತ

ಮುಂಬಯಿ: ಮಹಾರಾಷ್ಟ್ರ ಸರಕಾರದ ವಿರುದ್ಧ ಬಂಡಾಯವೆದ್ದಿರುವ ಸಚಿವ ಏಕನಾಥ ಶಿಂಧೆ ಅವರನ್ನು ಬೆಂಬಲಿಸಿ ಶುಕ್ರವಾರ ಮತ್ತಷ್ಟು ಶಿವಸೇನೆ ಶಾಸಕರು ಗುವಾಹಾಟಿಯತ್ತ ಮುಖ ಮಾಡಿದ್ದಾರೆ. ಶಿಂಧೆ ಬಣದಲ್ಲಿ ಶಾಸಕರ ಸಂಖ್ಯೆ 50 ದಾಟಿದೆ. ಹೀಗಾಗಿ ಉದ್ಧವ್‌ ಸರಕಾರ ಪತನ ಬಹುತೇಕ ಖಚಿತವಾಗಿದೆ.

ಗುವಾಹಾಟಿಯಲ್ಲಿರುವ ಬಂಡಾಯ ಶಾಸಕರು ತಮ್ಮ ವಿರುದ್ಧ ನೀಡಲಾಗಿರುವ ಅನರ್ಹತೆ ನೋಟಿಸ್‌ಗಾಗಿ ಕಾಯುತ್ತಿದ್ದು, ಅದು ತಲುಪಿದ ಕೂಡಲೇ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ. ಜತೆಗೆ ಪಕ್ಷ ಮತ್ತು ಪಕ್ಷದ ಚಿಹ್ನೆಯ ಹಕ್ಕಿಗಾಗಿ ಚುನಾವಣ ಆಯೋಗಕ್ಕೆ ಅರ್ಜಿ ಸಲ್ಲಿಸುವುದಕ್ಕೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಇಂದು ಸಭೆ
ಉದ್ಧವ್‌ ಠಾಕ್ರೆ ಅವರು ಶನಿವಾರ ಮಧ್ಯಾಹ್ನ ಶಿವಸೇನೆಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದಾರೆ. ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ವರ್ಚುವಲ್‌ ಭಾಷಣ ಮಾಡಿದ ಉದ್ಧವ್‌, ಶಿಂಧೆ ಸೇರಿದಂತೆ ಬಂಡಾಯ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಪಕ್ಷವನ್ನು ಹೋಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಶಿವಸೇನೆ, ಬಾಳಾಸಾಹೇಬ್‌ ಹೆಸರನ್ನು ಪ್ರಸ್ತಾವಿಸದೆ ಅವರು ಹೇಗೆ ಮುನ್ನಡೆಯುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಪವಾರ್‌-ಉದ್ಧವ್‌ ಭೇಟಿ
ಈ ನಡುವೆ ಶುಕ್ರವಾರವೂ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಿಎಂ ಉದ್ಧವ್‌ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಪವಾರ್‌ ಜತೆಗೆ ಡಿಸಿಎಂ ಅಜಿತ್‌ ಪವಾರ್‌, ರಾಜ್ಯ ಸಂಪುಟ ಸಚಿವ ಜಯಂತ್‌ ಪಾಟೀಲ್‌, ನಾಯಕ ಪ್ರಫ‌ುಲ್‌ ಪಟೇಲ್‌ ಕೂಡ ಇದ್ದರು. ಇದೇ ವೇಳೆ ಮಹಾರಾಷ್ಟ್ರದ ಅಡ್ವೊಕೇಟ್‌ ಜನರಲ್‌ ಅಶುತೋಷ್‌ ಕುಂಭಕೋನಿ ಅವರನ್ನು ತಮ್ಮ ಕಾರ್ಯಾಲಯಕ್ಕೆ ಕರೆಸಿಕೊಂಡಿರುವ ಉದ್ಧವ್‌ ಪ್ರಸ್ತುತ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿ ಶಾಸಕರ ಅನರ್ಹತೆ ಮತ್ತಿತರ ಕಾನೂನು ಅಂಶಗಳ ಕುರಿತು ಸಲಹೆ ಪಡೆದಿದ್ದಾರೆ.

ರಾಷ್ಟ್ರೀಯ ಪಕ್ಷ ಸಂಪರ್ಕದಲ್ಲಿಲ್ಲ!
ಗುರುವಾರವಷ್ಟೇ “ಪ್ರಬಲ ರಾಷ್ಟ್ರೀಯ ಪಕ್ಷ’ವೊಂದು ನಮಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದ ಶಿಂಧೆ ಶುಕ್ರವಾರ ಯೂಟರ್ನ್ ಹೊಡೆದಿದ್ದಾರೆ. “ದೊಡ್ಡ ಶಕ್ತಿ ನಮ್ಮ ಬೆಂಬಲಕ್ಕಿದೆ ಎಂದು ಬಾಳಾಸಾಹೇಬ್‌ ಠಾಕ್ರೆ ಮತ್ತು ಆನಂದ್‌ ದಿಘೆ ಅವರ ಶಕ್ತಿಯ ಕುರಿತಾಗಿ ಹೇಳಿದ್ದು’ ಎಂದು ಸ್ಪಷ್ಟನೆ ನೀಡಿದ್ದಾರೆ. ಶಿವಸೇನೆಯ 55 ಶಾಸಕರ ಪೈಕಿ 40 ಮಂದಿ ಗುವಾಹಾಟಿಗೆ ಬಂದಿದ್ದಾರೆ. ಈಗ ನಮ್ಮದೇ ನಿಜವಾದ ಶಿವಸೇನೆ. ನಮ್ಮ ವಿರುದ್ಧ ಯಾರೂ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ನಾನು ಶಿಂಧೆಗಾಗಿ ಎಲ್ಲವನ್ನೂ ಮಾಡಿದೆ. ನನ್ನ ಕೈಯ್ಯಲ್ಲಿದ್ದ ಖಾತೆಯನ್ನೂ ಅವರಿಗೆ ಬಿಟ್ಟುಕೊಟ್ಟೆ. ಆದರೆ ಅವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.
-ಉದ್ಧವ್‌ ಠಾಕ್ರೆ, ಮಹಾರಾಷ್ಟ್ರ ಸಿಎಂ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.