ಬಾಲಕಿಯ ಮೇಲೆ ಅತ್ಯಾಚಾರ ಅಪ್ರಾಪ್ತ ಬಾಲಕ ಸೇರಿದಂತೆ ಆರು ಮಂದಿಯ ಬಂಧನ
Team Udayavani, Aug 16, 2022, 7:30 PM IST
ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಐವರು ಪುರುಷರು ಮತ್ತು ಅಪ್ರಾಪ್ತ ಬಾಲಕ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕನ್ನಡ್ ತಾಲೂಕಿನ ನಿವಾಸಿಯಾದ ಬಾಲಕಿಯ ಮೇಲೆ ಆರೋಪಿಗಳಲ್ಲೋರ್ವ ಶುಕ್ರವಾರ ಗ್ರಾಮದ ಜಮೀನೊಂದರಲ್ಲಿ ಅತ್ಯಾಚಾರವೆಸಗಿದ್ದು, ನಂತರ ಅಪರಾಧ ಬೆಳಕಿಗೆ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಹುಡುಗಿಯ ಪೋಷಕರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಬಳಿಕ 19 ರಿಂದ 33 ವರ್ಷ ವಯಸ್ಸಿನ ಐವರನ್ನು ಹಾಗೂ ಬಾಲಾಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಐವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ಆ. 17 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..