ಇಂದು ಮಹಾ ಫ‌ಲಿತಾಂಶ

Team Udayavani, Oct 24, 2019, 5:30 AM IST

ಹೊಸದಿಲ್ಲಿ: ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಹಾಗೂ 18 ರಾಜ್ಯಗಳ 51 ವಿಧಾನ ಸಭಾ ಕ್ಷೇತ್ರಗಳು, ಎರಡು ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫ‌ಲಿತಾಂಶ ಗುರುವಾರ ಪ್ರಕಟವಾಗಲಿದೆ. ಸೋಮವಾರವಷ್ಟೇ ಈ ಎಲ್ಲ ಕ್ಷೇತ್ರಗಳಿಗೂ ಮತದಾನ ನಡೆದಿತ್ತು. ಮಹಾ ರಾಷ್ಟ್ರದಲ್ಲಿ ಶೇ.61.13 ಹಾಗೂ ಹರಿಯಾಣದಲ್ಲಿ ಶೇ. 68ರಷ್ಟು ಮತದಾನ ದಾಖಲಾಗಿತ್ತು.

ಗುರುವಾರ ಬೆಳಗ್ಗೆ 8ರಿಂದಲೇ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಚಿತ್ರಣ ಹೊರಬೀಳಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದ ಮತಗಟ್ಟೆ ಸಮೀಕ್ಷೆಗಳು ಈಗಾಗಲೇ ಹೊರಬಿದ್ದಿದ್ದು, ಎರಡೂ ರಾಜ್ಯಗಳಲ್ಲಿ ಆಡಳಿತಾರೂಢ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ.

ಉಪಚುನಾವಣೆ ನಡೆದಿರುವಂಥ ಕ್ಷೇತ್ರಗಳ ಪೈಕಿ 30 ಬಿಜೆಪಿ, 12 ಕಾಂಗ್ರೆಸ್‌ ಹಾಗೂ ಉಳಿದವುಗಳು ಪ್ರಾದೇಶಿಕ ಪಕ್ಷಗಳ ಹಿಡಿತದಲ್ಲಿದ್ದವು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ