
ಗಾಂಧಿಗೆ ಭಾರತ ರತ್ನ; ಕೇಂದ್ರಕ್ಕೆ ಸೂಚನೆ ನೀಡಿ- ಪಿಐಎಲ್ ಗೆ ಸುಪ್ರೀಂ ಹೇಳಿದ್ದೇನು ಗೊತ್ತೆ?
ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಎಂದು ಪರಿಗಣಿಸಲಾಗಿದೆ. ದೇಶದ ಜನರು ಅತೀ ಹೆಚ್ಚಿನ ಗೌರವವನ್ನು ನೀಡಿದ್ದಾರೆ.
Team Udayavani, Jan 17, 2020, 12:23 PM IST

ನವದೆಹಲಿ: ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಪಿಐಎಲ್ ಗೆ ಸಂಬಂಧಿಸಿಂತೆ ಯಾವುದೇ ಆದೇಶ ನೀಡಲು ನಿರಾಕರಿಸಿದೆ.
ಮಹಾತ್ಮ ಗಾಂಧಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ವಿಚಾರದಲ್ಲಿ ಯಾವುದೇ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೇ ಮಹಾತ್ಮ ಗಾಂಧಿ ಭಾರತ ರತ್ನ ಪ್ರಶಸ್ತಿಗಿಂತ ಮೇರು ವ್ಯಕ್ತಿತ್ವ ಹೊಂದಿದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿದೆ.
ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಎಂದು ಪರಿಗಣಿಸಲಾಗಿದೆ. ದೇಶದ ಜನರು ಅತೀ ಹೆಚ್ಚಿನ ಗೌರವವನ್ನು ನೀಡಿದ್ದಾರೆ. ಹೀಗಾಗಿ ಯಾವುದೇ ಸಾಮಾನ್ಯ ಪ್ರಶಸ್ತಿ ಮೂಲಕ ಅವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.
ಈ ಹಿಂದೆಯೂ ಮಹಾತ್ಮ ಗಾಂಧಿಗೆ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಹಲವಾರು ಪಿಐಎಲ್ ಸಲ್ಲಿಕೆಯಾಗಿತ್ತು. ಆದರೆ ಅವೆಲ್ಲವೂ ತಿರಸ್ಕೃತಗೊಂಡಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
