ಮಲ್ಯ ತಲೆಮರೆಸಿಕೊಂಡಿರುವ ಅಪರಾಧಿ: ಎಲ್ಲ ಆಸ್ತಿಪಾಸ್ತಿ ಜಪ್ತಿ ಸಾಧ್ಯ
Team Udayavani, Jan 5, 2019, 10:14 AM IST
ಮುಂಬಯಿ : ಸಾವಿರಾರು ಕೋಟಿ ರೂ. ಬ್ಯಾಂಕ್ ಸಾಲ ಬಾಕಿ ಇರಿಸಿ ವಿದೇಶಕ್ಕೆ ಪಲಾಯನ ಮಾಡಿ ಈಗಿನ್ನು ಬ್ರಿಟನ್ ನಿಂದ ಭಾರತಕ್ಕೆ ಗಡೀಪಾರಾಗಲಿರುವ ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಇಲ್ಲಿನ ಪಿಎಂಎಲ್ಎ ನ್ಯಾಯಾಲಯ ಇಂದು ಶನಿವಾರ ‘ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿ’ ಎಂದು ಘೋಷಿಸಿದೆ.
ನ್ಯಾಯಾಲಯದ ಈ ಘೋಷಣೆಯಿಂದಾಗಿ ಸರಕಾರ ಈಗಿನ್ನು ವಿಜಯ್ ಮಲ್ಯ ಅವರ ಎಲ್ಲ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದಾಗಿದೆ.
ನ್ಯಾಯಾಲಯದ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಕ್ಕೆ ತನಗೆ ಸ್ವಲ್ಪ ಕಾಲಾವಕಾಶ ಬೇಕೆಂದು ಕೋರಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯದ ಈ ಆದೇಶದಿಂದ ವಿಜಯ್ ಮಲ್ಯ ಅವರು ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲ್ಪಟ್ಟಿರುವ ದೇಶದ ಮೊದಲ ಉದ್ಯಮಿ ಎನಿಸಿಕೊಂಡಿದ್ದಾರೆ.
2018ರ ತಲೆ ಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳ ಕಾಯಿದೆಯಡಿ ವಿಜಯ್ ಮಲ್ಯ ಅವರನ್ನು ಆ ರೀತಿ ಘೋಷಿಸಲಾಗಿದೆ. ಮಲ್ಯ ಅವರನ್ನು ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವ ದಿಶೆಯಲ್ಲಿ ಸೂಕ್ತ ನಿರ್ದೇಶ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯದ ಅರ್ಜಿಯ ಮೇಲಿನ ವಿಚಾರಣೆಯನ್ನು ಮುಂಬಯಿಯಲ್ಲಿನ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯವು ಮಲ್ಯ ಅವರನ್ನು ತಲೆ ಮರೆಸಿಕೊಂಡಿರುವ ಅಪರಾಧಿ ಎಂದು ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ