ದೀದಿ ನಾಮಪತ್ರ ರದ್ದು ಮಾಡಿ: ಬಿಜೆಪಿ
Team Udayavani, Sep 14, 2021, 11:30 PM IST
ಕೋಲ್ಕತಾ: ಪಶ್ಚಿಮ ಬಂಗಾಳದ ಭವಾನಿಪುರದಿಂದ ಸ್ಪರ್ಧಿಸಿರುವ ಸಿಎಂ ಮಮತಾ ಬ್ಯಾನರ್ಜಿ ನಾಮಪತ್ರ ರದ್ದು ಮಾಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಸಿಎಂ ತಮ್ಮ ವಿರುದ್ಧ ದಾಖಲಾಗಿರುವ 5 ಪ್ರಕರಣಗಳನ್ನು ನಾಮಪತ್ರ ಸಲ್ಲಿಕೆ ವೇಳೆ ನಮೂದಿಸಿಲ್ಲ ಎಂದು ಬಿಜೆಪಿ ದೂರಿದೆ.
ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ಆಯೋಗಕ್ಕೆ ದೂರು ನೀಡಿ, ಪ್ರಕರಣಗಳ ವಿವರಗಳನ್ನು ನೀಡಿದ್ದಾರೆ. ಆದರೆ ಈ ಕುರಿತಾಗಿ ಚುನಾವಣಾ ಆಯೋಗ ಈಗಾಗಲೇ ತನಿಖೆ ನಡೆಸಿದ್ದು, ಬಾಕಿಯಿರುವ ಪ್ರಕರಣಗಳಲ್ಲಿ ಆರೋಪಿ ಸ್ಥಾನದಲ್ಲಿರುವುದು ಸಿಎಂ ಮಮತಾ ಅಲ್ಲ ಎನ್ನುವುದನ್ನು ಖಚಿತ ಪಡಿಸಿಕೊಂಡಿದೆ ಎಂದು ಟಿಎಂಸಿ ಹೇಳಿದೆ.
ಇದನ್ನೂ ಓದಿ:ಜಾರಕಿಹೊಳಿ ಸಿಡಿ ಪ್ರಕರಣ: ವಿಚಾರಣೆ ಮುಂದಕ್ಕೆ
ಮತ್ತೊಂದೆಡೆ,ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟಿಎಂಸಿ ತಮ್ಮನ್ನು ಬಾಂಬ್ಗಳನ್ನು ಇರಿಸಿ ಕೊಲ್ಲಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಅವರ ನಿವಾಸದ ಸಮೀಪವೇ ಬಾಂಬ್ ಸ್ಫೋಟಗೊಂಡದ್ದರಿಂದ ಈ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು