ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ,ಕೂಡಲೇ ಆಸ್ಪತ್ರೆಗೆ ದಾಖಲಿಸಿ: ಕೈಲಾಶ್
Team Udayavani, Dec 27, 2019, 8:01 AM IST
ಇಂದೋರ್: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಭಟನೆ ಮುಂದುವರಿಸಲು ಸಲಹೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹರಿಹಾಯ್ದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದೊಳಗೆ ಅಕ್ರಮವಾಗಿ ಒಳನುಸುಳುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತದೆ. ಹಾಗಾಗಿ ಮಮತಾ ಬ್ಯಾನರ್ಜಿ ಅವರ ಓಟ್ ಬ್ಯಾಂಕ್ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದ್ದರಿಂದಲೇ ಅವಳು ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡು ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದಾರೆ. ಕೂಡಲೇ ಅವರನ್ನು ವೈದ್ಯಕೀಯವಾಗಿ ಪರೀಕ್ಷೆಗೊಳಪಡಿಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ವಿಜಯವರ್ಗಿಯಾ ಸುದ್ದಿಗಾರರಿಗೆ ತಿಳಿಸಿದರು.
ಗುರುವಾರ ಕೋಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ವಿರುದ್ಧದ ಪ್ರತಿಭಟನೆಯನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮುಂದುವರಿಸಲು ಎಲ್ಲ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್