ಬಂಗಾಳಕ್ಕೆ ದೀದಿ ಅವಮಾನ
Team Udayavani, Feb 8, 2019, 11:45 PM IST
ಕೋಲ್ಕತಾ/ಮಹಾರಾಜ್ಗಂಜ್: ಕೇಂದ್ರ ಸರ್ಕಾರದ ವಿರುದ್ಧ ಧರಣಿ ಕುಳಿತುಕೊಳ್ಳುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳಕ್ಕೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಜಲಪಾಯ್ಗಾರಿಯಲ್ಲಿ ಹೈ ಕೋರ್ಟ್ ಕಟ್ಟಡ ಉದ್ಘಾಟಿಸಿದ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾ ಡಿದರು. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಧರಣಿ ಕುಳಿತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಿದವರು ಹಿಂಸಾತ್ಮಕ ದಾರಿಯನ್ನೇ ಹಿಡಿದಿದ್ದಾರೆ ಎಂದು ಟೀಕಿಸಿದ್ದಾರೆ. ಈ ಕಾವಲುಗಾರ ಚಿಟ್ಫಂಡ್ನಲ್ಲಿ ಬಡವರಿಗೆ ಮೋಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಹೈಕೋರ್ಟ್ ಉದ್ಘಾಟಿಸಿದ್ದನ್ನು ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಮಹಾರಾಜ್ಗಂಜ್ನಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಸ್ಪಿ, ಬಿಎಸ್ಪಿಗಳಿಗೆ ಅಕ್ರಮ ವಲಸಿಗರೇ ವೋಟ್ ಬ್ಯಾಂಕ್ ಎಂದು ದೂರಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್