ಮೂರು ವರ್ಷ ಹಿಂದೆ ಇದೇ ದಿನ ಪ್ರಮಾಣ ವಚನ ಸ್ವೀಕರಿಸಿದ್ದೆ: ಮಮತಾ ನೆನಪು

Team Udayavani, May 27, 2019, 11:38 AM IST

ಕೋಲ್ಕತ : ಮೂರು ವರ್ಷಗಳ ಹಿಂದೆ ಇದೇ ದಿನ ಮೇ 27ರಂದು ತಾನು ಎರಡನೇ ಅವಧಿಗೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಮಮತಾ ಬ್ಯಾನರ್ಜಿ ನೆನಪಿಸಿಕೊಂಡಿದ್ದಾರೆ. ಅಂತೆಯೇ ಮುಂಬರುವ ದಿನಗಳಲ್ಲಿ ರಾಜ್ಯದ ಜನರ ಅಭ್ಯುದಯಕ್ಕೆ ಅಹರ್ನಿಶಿ ದುಡಿಯುವ ಭರವಸೆಯನ್ನು ನೀಡಿದ್ದಾರೆ.

ಪಶ್ಚಿಮ ಬಂಗಾಲವು ಮುಂದೊಂದು ದಿನ ವಿಶ್ವದ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಲಿದೆ ಎಂದು ಮಮತಾ ಈ ಸಂದರ್ಭದಲ್ಲಿ ಹೇಳಿದರು.

‘2016ರಲ್ಲಿ ಇದೇ ದಿನ ಮಾ-ಮಾಠೀ-ಮಾನುಷ್‌ ಸರಕಾರ ಎರಡನೇ ಅವಧಿಗೆ ಪ್ರಚಂಡ ಬಹುಮತದೊಂದಿಗೆ ಪ್ರಮಾಣ ವಚನ ಸ್ವೀಕರಿಸಿತು. ಅದಕ್ಕಾಗಿ ರಾಜ್ಯದ ಜನರಿಗೆ ಆಭಾರಿಯಾಗಿದ್ದೇವೆ ಮತ್ತು ಅವರ ಸಮಗ್ರ ಅಭ್ಯುದಯಕ್ಕಾಗಿ ಶ್ರಮಿಸುವುದನ್ನು ನಾವು ಮುಂದುವರಿಸುತ್ತೇವೆ’ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

2011ರಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಪಕ್ಷ ಸಿಪಿಎಂ ನೇತೃತ್ವದ ಎಡ ರಂಗ ಸರಕಾರವನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆರಿತ್ತು. ಮತ್ತು 2016ರಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಮರಳಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ