ರಾಜೀನಾಮೆಗೆ ಪಕ್ಷ ಒಪ್ಪಲಿಲ್ಲ ಎಂದ ಮಮತಾ
Team Udayavani, May 26, 2019, 6:02 AM IST
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಮುಂದಾ ಗಿದ್ದು, ಅದಕ್ಕೆ ಪಕ್ಷ ಒಪ್ಪಿಗೆ ನೀಡಿಲ್ಲ. ಶನಿವಾರ ಪಕ್ಷದ ನಾಯಕರೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಸ್ವತಃ ಮಮತಾ ಅವರೇ ಈ ವಿಚಾರ ತಿಳಿಸಿದ್ದಾರೆ.
“ಹಲವು ರಾಜ್ಯಗಳಲ್ಲಿ ಪ್ರತಿಪಕ್ಷಗಳು ಸಂಪೂರ್ಣ ವಾಗಿ ಧೂಳೀಪಟವಾಗಿದ್ದು ಹೇಗೆ ಎಂಬುದು ಯಕ್ಷಪ್ರಶ್ನೆ ಯಾಗಿದೆ. ಇಲ್ಲಿ ಏನೋ ಸೆಟ್ಟಿಂಗ್ ನಡೆದಿದೆ ಹಾಗೂ ವಿದೇಶಿ ಶಕ್ತಿಯೂ ಭಾಗಿಯಾಗಿರುವ ಸಾಧ್ಯತೆಯಿದೆ’ ಎಂದು ಮಮತಾ ಹೇಳಿದ್ದಾರೆ. ಇದೇ ವೇಳೆ ಟಿಎಂಸಿಯ 143 ಬಂಡಾಯ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ತಿಳಿಸಿದ್ದು, ಟಿಎಂಸಿ ಯಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಬಿಜೆಪಿ ಕಾರ್ಯಕರ್ತನ ಹತ್ಯೆ: ಪ.ಬಂಗಾಳದಲ್ಲಿ ಚುನಾವ ಣೋತ್ತರ ಹಿಂಸಾಚಾರ ಮುಂದುವರಿದಿದ್ದು, ಬಿಜೆಪಿ- ಟಿಎಂಸಿ ನಡುವಿನ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬರು ಸಾವಿಗೀ ಡಾಗಿದ್ದಾರೆ. ನಾದಿಯಾ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ