ಸ್ನೇಹಿತನ ಪಿಸ್ತೂಲಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು: ಓರ್ವ ಜಖಂ
Team Udayavani, Dec 19, 2018, 12:11 PM IST
ಥಾಣೆ , ಮಹಾರಾಷ್ಟ್ರ : ಸ್ನೇಹಿತನ ಕೈಯಲ್ಲಿದ್ದ ನಾಡ ಪಿಸ್ತೂಲಿನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ 20ರ ಹರೆಯದ ತರುಣ ಗಾಯಗೊಂಡ ಘಟನೆ ನಡೆದಿದೆ.
ವಾಗ್ಲೆ ಎಸ್ಟೇಟ್ ಪ್ರದೇಶದ ಕಿಸಾನ್ ನಗರದಲ್ಲಿ ಸ್ನೇಹಿತರ ಒಂದು ಗುಂಪು ರಸ್ತೆ ಬದಿ ಹರಟೆ ಹೊಡೆಯುತ್ತಿದ್ದಾಗ ಅವರಲ್ಲೊಬ್ಬ ತನ್ನ ಬಳಿ ಇದ್ದ ಪಿಸ್ತೂಲನ್ನು ಹೊರ ತೆಗೆದು ತೋರಿಸುವಾಗ ಅದರಿಂದ ಆಕಸ್ಮಿಕವಾಗಿ ಗುಂಡು ಹಾರಿತು. ಆ ಗುಂಡು ವಿಜಯ್ ಯಾದವ್ ಎಂಬಾತನ ಹೊಟ್ಟೆಯನ್ನು ಹೊಕ್ಕಿತು.
ತೀವ್ರವಾಗಿ ಗಾಯಗೊಂಡ ವಿಜಯ್ ಯಾದವ್ನನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಎಸ್ ಎಂ ಪಾಟೀಲ್ ತಿಳಿಸಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ