Air India ಕ್ಯಾಬಿನ್ ಸಿಬಂದಿಯೊಂದಿಗೆ ಅಶಿಸ್ತು; ಕೆಳಗಿಳಿಸಿ ಪ್ರಯಾಣಿಕನ ಬಂಧನ
ವಿಮಾನಗಳಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಅಶಿಸ್ತಿನ ವರ್ತನೆಗಳು...!!
Team Udayavani, Apr 10, 2023, 5:23 PM IST
ಹೊಸದಿಲ್ಲಿ : ಇತ್ತೀಚಿನ ದಿನಗಳಲ್ಲಿ, ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರ ಅಶಿಸ್ತಿನ ವಿವಿಧ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಕ್ಕೆ ಹೊಸ ಸೇರ್ಪಡೆಯಾಗಿ ದೆಹಲಿ-ಲಂಡನ್ ವಿಮಾನದಲ್ಲಿ ಇಬ್ಬರು ಕ್ಯಾಬಿನ್ ಸಿಬಂದಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಏರ್ ಇಂಡಿಯಾದಿಂದ ಡಿಬೋರ್ಡ್ ಮಾಡಿದ 25 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತನನ್ನು ಜಸ್ಕಿರತ್ ಸಿಂಗ್ ಎಂದು ಗುರುತಿಸಲಾಗಿದೆ.ವಿಮಾನ ಹೊರಟ ಸ್ವಲ್ಪ ಸಮಯದ ನಂತರ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರು ಮಾತನಾಡಿ, “ಈ ಸಂಬಂಧ ನಾವು ದೂರು ಸ್ವೀಕರಿಸಿದ್ದೇವೆ ಮತ್ತು ಲಂಡನ್ಗೆ ತನ್ನ ಪೋಷಕರೊಂದಿಗೆ ಪ್ರಯಾಣಿಸುತ್ತಿದ್ದ ಜಸ್ಕಿರತ್ ಸಿಂಗ್ ಅವರನ್ನು ವಶಕ್ಕೆ ಪಡೆದಿದ್ದೇವೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಇಬ್ಬರು ಕ್ಯಾಬಿನ್ ಸಿಬಂದಿಗಳೊಂದಿಗೆ ಅಶಿಸ್ತಿನ ವರ್ತನೆಗಾಗಿ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಲಂಡನ್ ಹೀಥ್ರೂಗೆ ಹೊರಟ ವಿಮಾನ ಪ್ರಯಾಣಿಕನ ಗಂಭೀರ ಅಶಿಸ್ತಿನ ವರ್ತನೆಯಿಂದಾಗಿ ಹಾರಾಟ ಆರಂಭಿಸಿದ ಸ್ವಲ್ಪ ಹೊತ್ತಲ್ಲೇ ಪೈಲಟ್ ಇನ್ ಕಮಾಂಡ್ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಲು ನಿರ್ಧರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ