
ತಮಿಳುನಾಡು: ಕೋರ್ಟ್ ಆವರಣದಲ್ಲೇ ಪತ್ನಿ ಮುಖದ ಮೇಲೆ ಆ್ಯಸಿಡ್ ಎಸೆದ ಪತಿ
Team Udayavani, Mar 23, 2023, 3:48 PM IST

ಚೆನ್ನೈ: ಕೋರ್ಟಿನ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ಗುರುವಾರ (ಮಾ.23 ರಂದು) ನಡೆದಿದೆ.
ಚಿತ್ರಾ ಎನ್ನುವ ಮಹಿಳೆ ತನ್ನ ಪತಿಯ ಮೇಲೆ ದೂರು ದಾಖಲಿಸಿದ್ದು, ಪತಿ ವಿರುದ್ಧ ಮಹಿಳೆ ದಾಖಲಿಸಿದ್ದ ಪ್ರಕರಣದ ವಿಚಾರಣೆಗೆ ಕೋರ್ಟ್ ಮುಂದಾದಾಗ ಆ್ಯಸಿಡ್ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ
ಪತ್ನಿ ತನ್ನ ವಿರುದ್ದ ದೂರು ದಾಖಲು ಮಾಡಿದ್ದಾಳೆ. ಇದರ ವಿಚಾರಣೆಗೆ ಬಂದ ಪತಿ ಶಿವಕುಮಾರ್ ನೀರಿನ ಬಾಟಲಿಯಲ್ಲಿ ಆ್ಯಸಿಡ್ ತುಂಬಿಸಿಕೊಂಡು ಕೋರ್ಟಿನ ಆವರಣಕ್ಕೆ ತಂದಿದ್ದಾನೆ. ಇನ್ನೇನು ವಿಚಾರಣೆ ಆರಂಭಗೊಳ್ಳಬೇಕು ಅಷ್ಟು ಹೊತ್ತಿಗೆ ಪತಿ ಶಿವಕುಮಾರ್ ಪತ್ನಿ ಚಿತ್ರ ಮುಖದ ಮೇಲೆ ಆ್ಯಸಿಡ್ ಎಸೆದಿದ್ದಾನೆ.
ಕೂಡಲೇ ಅಲ್ಲಿದ್ದ ಜನರು ಆರೋಪಿ ಶಿವಕುಮಾರ್ ನನ್ನು ಹಿಡಿದು ಥಳಿಸಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಆರೋಪಿಯನ್ನು ಎಳೆದು ಈಚೆಗೆ ತಂದಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ