Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
Team Udayavani, Mar 28, 2024, 9:59 AM IST
ಭೋಪಾಲ್: 80 ವರ್ಷದ ವೃದ್ಧ ಮಹಿಳೆಯೊಬ್ಬರ ಮೇಲೆ ಆಕೆಯ ಮೊಮ್ಮಗ ಹಾಗೂ ಆತನ ಪತ್ನಿ ಸೇರಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಭೋಪಾಲ್ನ ಜಹಾಂಗೀರಾಬಾದ್ ನಲ್ಲಿ ನಡೆದಿದೆ.
ವೃದ್ಧ ಮಹಿಳೆಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಲ್ಲೆ ನಡೆಸಲು ಸ್ಪಷ್ಟ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು ಬೇರೆ ಬೇರೆ ರೀತಿಯ ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ, ಒಂದು ಕಡೆ ಅಜ್ಜಿ ಸರಿಯಾಗಿ ಅಡುಗೆ ಮಾಡಲಿಲ್ಲ ಹಾಗಾಗಿ ಮೊಮ್ಮಗ ಹಾಗು ಆತನ ಪತ್ನಿ ಸೇರಿ ಅಜ್ಜಿಗೆ ಹಲ್ಲೆ ನಡೆಸಿರುವುದಾಗಿ ಹೇಳಿದರೆ ಇನ್ನೊಂದು ಮಾಹಿತಿಯ ಪ್ರಕಾರ ಅಸ್ತಿ ವಿಚಾರದಲ್ಲಿ ಕಳೆದ ಕೆಲ ದಿನಗಳಿಂದ ಅಜ್ಜಿ ಮೊಮ್ಮಗನ ನಡುವೆ ಜಗಳಗಳು ನಡೆಯುತ್ತಿತ್ತು ಇದೆ ವಿಚಾರದಲ್ಲಿ ಅಜ್ಜಿಗೆ ಮೊಮ್ಮಗ ಮತ್ತು ಆತನ ಪತ್ನಿ ಸೇರಿ ಮನಬಂದಂತೆ ಥಳಿಸಿದ್ದಾರೆ ಎಂದು ಹೇಳಲಾಗಿದೆ.
ಅಜ್ಜಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ, ನೆರೆಮನೆಯಲ್ಲಿ ಗಲಾಟೆ ಕೇಳುತ್ತಿದೆ ಎಂದು ಪಕ್ಕದ ಮನೆಯವರು ಮನೆಯ ಬಳಿ ತೆರಳಿದ ವೇಳೆ ಅಜ್ಜಿ ಬೊಬ್ಬೆ ಹಾಕುವುದು ಕೇಳಿದೆ ಈ ವೇಳೆ ಕಿಟಕಿಯ ಮೂಲಕ ಹಲ್ಲೆ ನಡೆಸುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹಲ್ಲೆ ನಡೆಸಿದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಹಲ್ಲೆ ನಡೆಸಲು ಕಾರಣ ಏನೆಂಬುದನ್ನು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಪೊಲೀಸರ ಲಾಠಿ ರುಚಿ ಬೀಳುತ್ತಿದ್ದಂತೆ ತಮ್ಮ ತಪ್ಪನ್ನು ಒಪ್ಪಿಕೊಂಡ ದಂಪತಿ ಇನ್ನು ಮುಂದೆ ಹಲ್ಲೆ ನಡೆಸುವುದಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ