
PM ಮೋದಿ ಅವರನ್ನು ಭೇಟಿಯಾದ ಸಂಸದೆ ಸುಮಲತಾ
Team Udayavani, Sep 19, 2023, 4:13 PM IST

ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೋದಿ ಭೇಟಿ ಕುರಿತು ಸಾಮಾಜಿಕ ಮಾಧ್ಯಮ ಟ್ವಿಟರ್( ‘ಎಕ್ಸ್’ನಲ್ಲಿ) ಮಾಹಿತಿ ಹಂಚಿಕೊಂಡಿರುವ ಅವರು, ‘ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ ಮತ್ತು ಇತ್ತೀಚೆಗಷ್ಟೇ ನಡೆದ ಜಿ–20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆ ತಿಳಿಸಿದ್ದೇನೆ’ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದಕ್ಕೆ ಸಂಬಂಧಿಸಿದ ಅನೇಕ ಸಲಹೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಸಾಕಷ್ಟು ಒತ್ತಡ ಮತ್ತು ಬಿಡುವಿಲ್ಲದ ಕೆಲಸಗಳ ನಡುವೆಯೂ ಕಡಿಮೆ ಸಮಯದಲ್ಲಿ ನನ್ನ ಭೇಟಿಗೆ ಅವಕಾಶ ನೀಡಿದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ದೇಶದ ಬಗೆಗಿನ ದೂರದೃಷ್ಟಿ ಯಾವಾಗಲೂ ನಮಗೆ ಸ್ಫೂರ್ತಿ ಹಾಗೂ ಮಾದರಿ. ಧನ್ಯವಾದಗಳು ಸರ್. ಎಂದು ಸುಮಲತಾ ಬರೆದುಕೊಂಡಿದ್ದಾರೆ.
ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ ನಡೆದ G20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆಗಳನ್ನು ತಿಳಿಸಿದೆ.
ಈ ಸಂದರ್ಭದಲ್ಲಿ ನನ್ನ ಕ್ಷೇತ್ರ ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದಕ್ಕೆ… pic.twitter.com/GFDsjZy0ZP
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) September 19, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ