ಕೇಂದ್ರ ಸಚಿವೆ ಮನೇಕಾ ಗಾಂಧಿ ತೀವ್ರ ಅಸ್ವಸ್ಥ ; ಅಸ್ಪತ್ರೆಗೆ ದಾಖಲು
Team Udayavani, Jun 2, 2017, 3:21 PM IST
ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಅವರು ಶುಕ್ರವಾರ ಧಿಡೀರ್ ಅಸ್ವಸ್ಥಗೊಂಡಿದ್ದು ಅವರನ್ನು ಉತ್ತರಪ್ರದೇಶದ ಪಿಲಿಭಿತ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಏರ್ ಅಂಬುಲೆನ್ಸ್ನಲ್ಲಿ ದೆಹಲಿಗೆ ಕರೆದೊಯ್ಯಲಾಗಿದೆ.
ತೀವ್ರ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ 60 ರ ಹರೆಯದ ಮನೇಕಾ ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ಅಲ್ಟ್ರಾಸೌಂಡ್ ಸ್ಕ್ಯಾನ್ಗೆ ಒಳಪಡಿಸಿದಾಗ ಮೂತ್ರಕೋಶದ ಕಲ್ಲು ಸಮಸ್ಯೆಯಿರುವುದು ತಿಳಿದುಬಂದಿದೆ.