ಮಕ್ಕಳ ಅತ್ಯಾಚಾರಿಗಳಿಗೆ ಮರಣ ದಂಡನೆ: ಮೇನಕಾ ಗಾಂಧಿ ಆಗ್ರಹ
Team Udayavani, Apr 13, 2018, 3:29 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಕಠುವಾದಲ್ಲಿ ಎಂಟರ ಹರೆಯದ ಬಾಲಕಿಯ ಮೇಲೆ ನಡೆದಿರುವ ಗ್ಯಾಂಗ್ ರೇಪ್ ಹಾಗೂ ಕೊಲೆಯಿಂದ ತೀವ್ರವಾಗಿ ಮನನೊಂದಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ, 12 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣ ದಂಡನೆಯ ಶಿಕ್ಷೆ ವಿಧಿಸುವುದಕ್ಕಾಗಿ ಪೋಕ್ಸೋ ಕಾಯಿದೆಗೆ (ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆಯ ಕಾಯಿದೆಗೆ) ತಿದ್ದುಪಡಿ ತರಲು ತನ್ನ ಸಚಿವಾಲಯ ಮನವಿ ಮಾಡುವುದಾಗಿ ಹೇಳಿದ್ದಾರೆ.
ಕಠುವಾ ರೇಪ್ ಕೇಸಿನಿಂದ ತಾನು ತೀವ್ರವಾಗಿ ನೊಂದಿದ್ದೇನೆ ಎದು ವಿಡಿಯೋ ಸಂದೇಶದಲ್ಲಿ ಹೇಳಿರುವ ಮೇನಕಾ ತನ್ನ ಸಚಿವಾಲಯವು ಪೋಕ್ಸೋ ಕಾಯಿದೆಗೆ ತಿದ್ದುಪಡಿ ತರುವ ಕ್ಯಾಬಿನೆಟ್ ಟಿಪ್ಪಣಿಯನ್ನು ಮುಂದಿನ ಸೋಮವಾರ ಮಂಡಿಸುವುದಾಗಿ ಹೇಳಿದ್ದಾರೆ.
ಇದಕ್ಕೆ ಮೊದಲು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರನ್ನು ಕಾನೂನಿನಡಿ ಕಠಿನವಾಗಿ ಶಿಕ್ಷಿಸಲು ಹೊಸ ಕಾನೂನೊಂದನ್ನು ತಮ ಸರಕಾರ ಜಾರಿಗೆ ತರಲಿರುವುದಾಗಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್