ಪರಿಕ್ಕರ್ ಚಿಕಿತ್ಸೆಗಾಗಿ ಮತ್ತೆ ಅಮೆರಿಕಕ್ಕೆ; ಗೋವಾ ಸಿಎಂ ಬದಲಾವಣೆ?
Team Udayavani, Aug 29, 2018, 2:24 PM IST
ಮುಂಬಯಿ: ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆಗಾಗಿ ಮತ್ತೆ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಹುದ್ದೆಗೆ ಬೇರೆಯವರನ್ನು ನೇಮಕ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.
3 ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಗೋವಾಕ್ಕೆ ಮರಳಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದ 62 ರ ಹರೆಯದ ಪರಿಕ್ಕರ್ ಮತ್ತೆ ಅನಾರೋಗ್ಯಕ್ಕೀಡಾಗಿ ಮುಂಬಯಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ರಾತ್ರಿಯೆ ವಿಮಾನದಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ಗೋವಾ ಸರಕಾರದ ಉನ್ನತ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರಕ್ಷಣಾ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಿಕ್ಕರ್ ಅವರು ಬಿಜೆಪಿಗೆ ಬಹುಮತವಿಲ್ಲದೆ ಇತರರ ಬೆಂಬಲ ಪಡೆದು ಸರಕಾರ ರಚಿಸುವ ಅನಿವಾರ್ಯತೆ ಎದುರಾದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ 2017 ರಲ್ಲಿ ಮತ್ತೆ ಗೋವಾದ ಮುಖ್ಯಮಂತ್ರಿ ಹುದ್ದೆಗೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು